ಬಿಜೆಪಿ ಭ್ರಮೆ ಈಡೇರುವುದು ಕಷ್ಟ : ಸಂಸದ ಡಿ.ಕೆ.ಸುರೇಶ್

Published : May 13, 2019, 09:34 AM IST
ಬಿಜೆಪಿ ಭ್ರಮೆ ಈಡೇರುವುದು ಕಷ್ಟ : ಸಂಸದ ಡಿ.ಕೆ.ಸುರೇಶ್

ಸಾರಾಂಶ

ರಾಜ್ಯ ರಾಜಕೀಯದಲ್ಲಿ ಕನಸು ಕಾಣುತ್ತಿರುವ ಬಿಜೆಪಿ ಭ್ರಮೆಯು ಈಡೇರುವುದು ಕಷ್ಟ ಎಂದು ಸಂಸದ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

ಆನೇಕಲ್: ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. 

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ರಾಜ್ಯ ಸರ್ಕಾರ ಬದಲಾವಣೆ ಎಂಬ ಬಿಜೆಪಿಯವರ ಭ್ರಮೆ ಈಡೇರುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. 

ಪಟ್ಟಣದಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ ಗೊಂಡ ಸಂದರ್ಭದಲ್ಲಿ ಮಾತನಾಡಿದರು. ಪುರಸಭೆ ಮಾಜಿ ಸದಸ್ಯರಾದ ಎನ್. ಎಸ್. ಪದ್ಮನಾಭ್, ರೇಣುಕಾ ಮಲ್ಲಿಕಾರ್ಜುನ್, ಚಂದ್ರಿಕಾ ಹನುಮಂತರಾಜು, ಉಷಾ ಕಾಂಗ್ರೆಸ್ ಸೇರಿದರು. ಶಾಸಕ ಬಿ. ಶಿವಣ್ಣ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ
ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ