
ಬೆಂಗಳೂರು, [ನ.14]: ಮೈತ್ರಿ ಸರ್ಕಾರದ ಮೊದಲ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುಲಿದೆ.
ಡಿಸೆಂಬರ್ 10 ರಿಂದ 21ರ ವರೆಗೆ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಧಿವೇಶನಕ್ಕೆ ದಿನಾಂಕ ನಿಗದಿ ಆಗಿರುವ ಕುರಿತು ಮುಖ್ಯಮಂತ್ರಿ ಸಚಿವಾಲಯ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ.
ರಾಜ್ಯಪಾಲರ ಒಪ್ಪಿಗೆ ಸಿಕ್ಕ ಬಳಿಕ ರಾಜ್ಯ ಸರ್ಕಾರ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಲಿದೆ.
ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ನಾಯಕರು ಮತ್ತು ಮೈತ್ರಿ ಸರ್ಕಾರದ ಕಾಂಗ್ರೆಸ್, ಜೆಡಿಎಸ್ ಸಚಿವರು, ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.