
ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಕೆ.ಸಿ. ವ್ಯಾಲಿ ಯೋಜನೆ ಮೂಲಕ ಸಂಸ್ಕರಿತ ಕೊಳಚೆ ನೀರನ್ನು ಹರಿಸುವುದಕ್ಕೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಂಸ್ಕರಿತ ಕೊಳಚೆ ನೀರನ್ನು ಕೆರೆಗಳಿಗೆ ಹರಿಸುವ ಸರ್ಕಾರದ ಯೋಜನೆಯಲ್ಲಿ ನೀರಿನ ಶುದ್ಧತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ವತಿಯಿಂದ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನುಇಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಶೇಷ ಪೀಠ ಅರ್ಜಿದಾರರ ಆತಂಕಕ್ಕೆ ಮನ್ನಣೆ ನೀಡಿದೆ.
ಸರ್ಕಾರದ ಸಮರ್ಥನೆಗಳನ್ನು ತಿರಸ್ಕರಿಸಿದ ಪೀಠ, ಕೊಳಚೆ ನೀರನ್ನು ಹರಿಸುವುದಕ್ಕೆ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ 1ಕ್ಕೆ ಮುಂದೂಡಿದೆ.
ಇದನ್ನೂ ಓದಿ: ‘ಕೆ.ಸಿ. ವ್ಯಾಲಿ’ ಎಂಬ ಸುಂದರ ಹೆಸರಿನ ಯೋಜನೆಯ ‘ಕೊಳಕು’ ಮುಖ
ರಾಜ್ಯ ಸರ್ಕಾರದ ವಕೀಲರು ಈ ಕೊಳಚೆ ನೀರು ಕುಡಿಯಲು ಅಥವಾ ವ್ಯವಸಾಯಕ್ಕೆ ಅಲ್ಲ, ಅಂತರ್ಜಲದ ಅಭಿವೃದ್ಧಿಗೆ ಎಂದು ತೀಳಿಸಿದಾಗ, ನ್ಯಾಯಾಧೀಶರು ಕುಡಿಯಲು ಮತ್ತು ವ್ಯವಸಾಯಕ್ಕೆ ಎಲ್ಲಿಂದ ತರುತ್ತೀರಿ? ಹಾಗೂ ಕೊಳಚೆ ಮತ್ತು ಶುದ್ಧನೀರನ್ನು ಭೂಮಿಯಲ್ಲಿ ಹೇಗೆ ಪ್ರತ್ಯೇಕವಾಗಿ ಇಡುತ್ತೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ‘ಕೆ.ಸಿ. ವ್ಯಾಲಿ ನೀರಿನ ಗುಣಮಟ್ಟ ಅಧ್ಯಯನಕ್ಕೆ ಸಮಿತಿ ರಚಿಸಿ’
ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರದ ಕೆರೆಗಳಿಗೆ ಹರಿಸುವ ಕೆ.ಸಿ. ವ್ಯಾಲಿ ಯೋಜನೆ ಬಗ್ಗೆ ಕೋಲಾರ-ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಜೂನ್ ತಿಂಗಳಿನಿಂದ ಪ್ರಾಯೋಗಿಕವಾಗಿ ನರಸಾಪುರದ ಬಳಿಯ ಲಕ್ಷ್ಮೀ ಸಾಗರ ಕೆರೆಗೆ ನೀರು ಹರಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.