ಹೈಕೋರ್ಟ್'ನಲ್ಲಿಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ; ಮತ್ತೆ ಜೈಲಾ.? ಬೇಲಾ..?

By Suvarna Web DeskFirst Published Mar 7, 2018, 10:03 AM IST
Highlights

ಮೊಹಮದ್ ನಲಪಾಡ್ ಅರ್ಜಿಯು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನು ಮಾ.2ರಂದು ನಗರದ 63ನೇ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿ ಜಾಮೀನು ನಿರಾಕರಿಸಿತ್ತು. ಇದರಿಂದ ಜಾಮೀನು ಕೋರಿ ಮೊಹಮ್ಮದ್ ಸೋಮವಾರ ಬೆಳಗ್ಗೆ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು(ಮಾ.07): ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಉದ್ಯಮಿ ಲೋಕನಾಥನ್ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯು ಹೈಕೋರ್ಟ್‌'ನಲ್ಲಿ ಇಂದು ವಿಚಾರಣೆಗೆ ಬರಲಿದೆ.

ಮೊಹಮದ್ ನಲಪಾಡ್ ಅರ್ಜಿಯು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನು ಮಾ.2ರಂದು ನಗರದ 63ನೇ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿ ಜಾಮೀನು ನಿರಾಕರಿಸಿತ್ತು. ಇದರಿಂದ ಜಾಮೀನು ಕೋರಿ ಮೊಹಮ್ಮದ್ ಸೋಮವಾರ ಬೆಳಗ್ಗೆ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ, ಸೋಮವಾರವೇ ಮೊಹಮ್ಮದ್ ಪರ ವಕೀಲರು, ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಹಾಜರಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು. ಇದಕ್ಕೆ ನಿರಾಕರಿಸಿದ್ದ ನ್ಯಾಯಮೂರ್ತಿಗಳು, ತುರ್ತಾಗಿ ವಿಚಾರಣೆ ನಡೆಸಲಾಗದು. ಸರದಿ ಪ್ರಕಾರವೇ ಅರ್ಜಿ ವಿಚಾರಣೆಗೆ ಬರಲಿದೆ ಎಂದು ತಿಳಿಸಿದ್ದರು. ನಂತರ ಅರ್ಜಿ ವಿಚಾರಣೆಯನ್ನು ಮಾ.7ಕ್ಕೆ ನಿಗದಿಪಡಿಸಿದ್ದರು. ಅದರಂತೆ ಅರ್ಜಿಯು ಹೈಕೋರ್ಟ್‌'ನಲ್ಲಿ ಇಂದು ವಿಚಾರಣೆಗೆ ನಿಗದಿಯಾಗಿದೆ.

click me!