‘ನಿಮ್ಮದೇನಿದ್ರೂ ವೈದ್ಯರಿಗೆ ಹೊಡೆಯೋ ಕೆಲಸ ಅಷ್ಟೇ’ ಹೆಗಡೆ ಕಾಲೆಳೆದ ಜೆಡಿಎಸ್

Published : Jun 24, 2019, 09:33 PM IST
‘ನಿಮ್ಮದೇನಿದ್ರೂ ವೈದ್ಯರಿಗೆ ಹೊಡೆಯೋ ಕೆಲಸ ಅಷ್ಟೇ’ ಹೆಗಡೆ ಕಾಲೆಳೆದ ಜೆಡಿಎಸ್

ಸಾರಾಂಶ

ಸುಸಜ್ಜಿತ ಆಸ್ಪತ್ರೆ ನಿರ್ಮಾಣ ತಮ್ಮ ಕೆಲಸ ಅಲ್ಲ ಅದು ರಾಜ್ಯ ಸರ್ಕಾರದ ಕೆಲಸ ಎಂಬರ್ಥದ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ಖಾರವಾದ ಪ್ರತಿಕ್ರಿಯೆಗಳು ಬರುತ್ತಿವೆ.

ಬೆಂಗಳೂರು[ಜೂ. 23]  ಉತ್ತರ ಕನ್ನಡಸ ಸಂಸದರ ನಡವಳಿಕೆಗೆ ಖಾರವಾದ ಪ್ರತಿಕ್ರಿಯೆಗಳು ಬರುತ್ತಿವೆ.  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆದಿತ್ತು. ಕಾರವಾರ ಪ್ರವಾಸಿ ಮಂದಿರದಲ್ಲಿ ಸಂಸದರ ಭೇಟಿ ಮಾಡಿದ್ದ ಯುವಕರ ನಿಯೋಗ ಆಸ್ಪತ್ರೆ ನಿರ್ಮಾಣದ ಬಗ್ಗೆ ಮನವಿ ಸಲ್ಲಿಸಿತ್ತು.

ಅನಂತ್ ಕುಮಾರ್ ಹೆಗಡೆ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಜೆಡಿಎಸ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ.  ಅನಂತ್ ಕುಮಾರ್ ಹೆಗಡೆಯವರೇ ನಿಮ್ಮದೇನಿದ್ರೂ ಆಸ್ಪತ್ರೆಯಲ್ಲಿ ವೈದ್ಯರಿಗೆ ಹೊಡೆಯೋ ಕೆಲಸ ಅಷ್ಟೇ. ಯಾವತ್ತೂ ಜನರಿಗೆ ಅನುಕೂಲ ಮಾಡಿಲ್ಲ. ಇದು ದುರಹಂಕಾರದ ಪರಮಾವಧಿ! ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈಗಾಗಲೇ ಕಾರವಾರದಲ್ಲಿ ಸುಸಜ್ಜಿತ ಆಸ್ಪತ್ರೆಗೆ ಈ ವರ್ಷದ ಬಜೆಟ್‌ನಲ್ಲಿ 150 ಕೋಟಿ ಮೀಸಲಿರಿಸಿದ್ದಾರೆ. ಇದುವೇ ಜನಪರ ಕೆಲಸ, ನೋಡಿ ಕಲಿಯಿರಿ! ಎಂದು ಕಾಲೆಳೆದಿದೆ.

ಉತ್ತರ ಕನ್ನಡಕ್ಕೆ ಸುಸಜ್ಜಿತ ಆಸ್ಪತ್ರೆ ಬೇಕು ಎಂಬ ಅಭಿಯಾನಕ್ಕೆ ಅನಂತ್ ಕುಮಾರ್ ಹೆಗಡೆ ಯಾವುದೇ  ಪ್ರತಿಕ್ರಿಯೆ ನೀಡಿರಲಿಲ್ಲ. ಕಳೆದ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಅನಂತ್ ಕುಮಾರ್ ಕೆನರಾ ಲೋಕಸಭಾ ಕ್ಷೇತ್ರದಿಂದ 4.7 ಲಕ್ಷ ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿ ಸಂಸದರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲಿನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ