ಸಂಪಾದಕರ ಮೇಲೆ ಕೇಸ್‌ : ಪತ್ರಕರ್ತರ ಸಂಘ ಖಂಡನೆ

Published : May 29, 2019, 11:48 AM ISTUpdated : May 29, 2019, 12:01 PM IST
ಸಂಪಾದಕರ ಮೇಲೆ ಕೇಸ್‌ : ಪತ್ರಕರ್ತರ ಸಂಘ ಖಂಡನೆ

ಸಾರಾಂಶ

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿರುವುದಕ್ಕೆ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.  

ಬೆಂಗಳೂರು :  ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿರುವುದು ಸರಿಯಾದ ಕ್ರಮವಲ್ಲ ಮತ್ತು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿರುವ ಸುದ್ದಿ ಉದ್ದೇಶಪೂರಿತ ಅಥವಾ ಸುಳ್ಳು ಮಾಹಿತಿಯಾಗಿದ್ದರೆ ಸ್ಪಷ್ಟನೆ, ವಿವರಣೆ ಕೊಡುವುದು ಕ್ರಮಬದ್ಧವಾದದ್ದು. ಆದರೆ ಸುದ್ದಿ ನೆಪ ಮಾಡಿ ದೂರು ದಾಖಲಿಸಿರುವುದು ದ್ವೇಷದ ನಡವಳಿಕೆಗೆ ಇನ್ನಷ್ಟುಒತ್ತು ನೀಡಿದಂತಾಗಿದೆ. ಈ ಹಿಂದೆಯೂ ಪತ್ರಕರ್ತರ ಮೇಲಿನ ಹಲವು ಪ್ರಕರಣಗಳ ಬಗ್ಗೆ ತಮ್ಮ ಗಮನಕ್ಕೆ ತಂದಾಗ ತಾವು ಸ್ಪಂದಿಸಿ, ಮಾಧ್ಯಮಸ್ನೇಹಿಯಾಗಿ ನಡೆದುಕೊಂಡಿರುವುದನ್ನು ಸಂಘ ಸ್ಮರಿಸುತ್ತದೆ. ವಿಶ್ವವಾಣಿ ಮೇಲೆ ದೂರು ದಾಖಲಿಸಿರುವುದು ತಮ್ಮ ಗಮನಕ್ಕೆ ಬಾರದೆಯೂ ಇರಬಹುದು. ಈ ಬಗ್ಗೆ ತಾವು ಮಾಹಿತಿ ತರಿಸಿಕೊಂಡು ಪರಿಶೀಲಿಸಿ ಪ್ರಕರಣ ಅಂತ್ಯಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದ್ವೇಷದ, ಕಿಚ್ಚಿನ ನಡೆ ಒಳ್ಳೆಯದಲ್ಲ. ಮಾಧ್ಯಮ ಮತ್ತು ಸರ್ಕಾರದ ನಡುವೆ ಸೌಹಾರ್ದ ವಾತಾವರಣ ಇರಲು ಮುಖ್ಯಮಂತ್ರಿಯಾಗಿ ತಾವು ಪ್ರಜ್ಞಾಪೂರ್ವಕವಾಗಿ ಸಂಯಮದ ಹೆಜ್ಜೆ ಇಡಬೇಕು ಎಂದು ಆಶಿಸುತ್ತೇನೆ. ಕದಡಿದ ವಾತಾವರಣ ತಿಳಿಗೊಳಿಸಲು ತಾವು ಇಚ್ಛಿಸಿದಲ್ಲಿ ಸಂವಾದಕ್ಕೂ ಸಿದ್ಧವಿದ್ದೇವೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು