
ಬೆಂಗಳೂರು, (ಏ.29): ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕರೆದಿದ್ದ ಸಮಾನ ಮನಸ್ಕ ಶಾಸಕರ ಸಭೆ ರದ್ದಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಾಡಕ್ಕೆ ಇಳಿದಿದ್ದರಿಂದ ಸಮಾನ ಮನಸ್ಕ ಶಾಸಕರು ತಮ್ಮ ನಿಲುವು ಬದಲಿಸಿದ್ದಾರೆ.
ಲೋಕಸಭಾ ಮತದಾನ ಮುಗಿಯುತ್ತಿದ್ದಂತೆಯೇ ರಾಜಕೀಯ ಕ್ರಾಂತಿ ಎಬ್ಬಿಸಿದ ಕಾಂಗ್ರೆಸ್ ಶಾಸಕ
'ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ' ಎಂದು ಹೇಳಿದ್ದ ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸೋಮಶೇಖರ್ ಅವರು ಸಮಾನ ಮನಸ್ಕ ಶಾಸಕರ ಸಭೆ ಕರೆದಿದ್ದರು. ಮೈತ್ರಿ ಸರ್ಕಾರದ ವಿರುದ್ಧ ಈ ಸಭೆ ಕರೆಯಲಾಗಿದೆ ಎಂದು ವಿಶ್ಲೇಷಿಸಲಾಗಿತ್ತು.
ಸಭೆಗೆ ಶಾಸಕರನ್ನು ಆಹ್ವಾನಿಸಿದ್ದ ಆಹ್ವಾನ ಪತ್ರ ವೈರಲ್ ಆಗಿತ್ತು. ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಸಭೆ ನಡೆಸಬಾರದು ಎಂದು ಎಲ್ಲರಿಗೂ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದ್ರಿಂದ ಸಭೆಯನ್ನು ರದ್ದು ಮಾಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಮತ್ತೊಂದೆಡೆ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಹುತೇಕ ಶಾಸಕರು ಅಲ್ಲಿಗೆ ತೆರಳಿದ್ದಾರೆ. ಹಾಗಾಗಿ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.
ಈ ಕಾರಣದಿಂದ ಸಮಾನ ಮನಸ್ಕ ಶಾಸಕರ ಸಭೆ ಮುಂದೂಡಲಾಗಿದೆ ಎಂದು ಸೋಮಶೇಖರ್ ಸಬೂಬು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.