
ಬೆಂಗಳೂರು[ಮೇ.31]: ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳಿಗೆ ಮೊನ್ನೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ರಾಜ್ಯದ 7 ನಗರಸಭೆ, 30 ಪುರಸಭೆ, 19 ಪಟ್ಟಣ ಪಂಚಾಯಿತಿ ಸೇರಿದಂತೆ 1,361 ವಾರ್ಡ್‌ಗಳಲ್ಲಿ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತಎಣಿಕೆ ಕಾರ್ಯ ಆರಂಭವಾಗಲಿದೆ.
ಯಾವೆಲ್ಲ ನಗರಸಭೆಗಳ ಫಲಿತಾಂಶ?
7 ನಗರಸಭೆ: ಹಿರಿಯೂರು, ಹರಿಹರ, ಶಹಾಪುರ, ಶಿಡ್ಲಘಟ್ಟ, ತಿಪಟೂರು, ನಂಜನಗೂಡು, ಬಸವಕಲ್ಯಾಣ ನಗರಸಭೆಗಳ ಫಲಿತಾಂಶ ಇಂದು ಹೊರ ಬೀಳಲಿದೆ
30 ಪುರಸಭೆ: ಆನೇಕಲ್, ದೇವನಹಳ್ಳಿ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಪಾವಗಡ, ಕುಣಿಗಲ್, ಕೆ.ಆರ್. ನಗರ,
ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವಿ, ಭಟ್ಕಳ, ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ
19 ಪಟ್ಟಣ ಪಂಚಾಯಿತಿ
ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಸೊರಬ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಅಳ್ನಾವರ, ಔರಾದ್, ಹೊನ್ನಾವರ, ಸಿದ್ದಾಪುರ, ಕಮಲಾಪುರ
ಲೋಕಸಮರದ ಅಬ್ಬರ ಬಳಿಕ ಸ್ಥಳೀಯ ಸಂಸ್ಥೆಗಳ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದ್ದು ಯಾವ್ಯಾವ ಜಿಲ್ಲೆಗಳಲ್ಲಿ ಯಾವ ಪಕ್ಷ ಗೆಲುವು ಸಾಧಿಸುತ್ತೆ..? ಅನ್ನೋದು ಗೊತ್ತಾಗಲು ಕೆಲವು ಕ್ಷಣಗಳು ಮಾತ್ರ ಬಾಕಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.