
ಬೆಂಗಳೂರು (ಅ. 01): ಮೈತ್ರಿ ಸರ್ಕಾರದಲ್ಲಿ ಮತ್ತೆ ಸೂಪರ್ ಸಿಎಂ ರೇವಣ್ಣ ದರ್ಬಾರ್ ಶುರುವಾಗಿದೆ. ಯಾರು ಏನೇ ಹೇಳಿದ್ರೂ ಎಚ್.ಡಿ.ರೇವಣ್ಣ ಖದರ್ ನಿಲ್ಲುತ್ತಿಲ್ಲ.
ಪಿಡಬ್ಲೂಡಿ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ ಸೇರಿ 700 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರು, ಡಿ ಗ್ರೂಪ್ ನೌಕರರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಜೂನ್-ಜುಲೈನಲ್ಲಿ ನಡೆಯಬೇಕಿದ್ದ ಸಾಮೂಹಿಕ ವರ್ಗಾವಣೆ ಈಗಲೇ ಆಗಿದ್ಯಾಕೆ ಎಂಬ ಪ್ರಶ್ನೆ ಎದ್ದಿದೆ.
"
ರಾತ್ರೋ ರಾತ್ರಿ ಲೋಕೋಪಯೋಗಿ ಇಲಾಖೆಯಲ್ಲಿ ಅಧಿಕಾರಿಗಳ ಎತ್ತಂಗಡಿ ಮಾಡಲಾಗಿದೆ. ದಿಢೀರ್ ವರ್ಗಾವಣೆಗೆ ಇಂಜಿನಿಯರ್ಗಳು ಹಾಗೂ ಸಿಬ್ಬಂದಿ ಗಲಿಬಿಲಿಗೊಂಡಿದ್ದಾರೆ. ಸಚಿವ ರೇವಣ್ಣ ಕ್ರಮಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಗೊಂದಲ ಸೃಷ್ಟಿ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.