
ಉಡುಪಿ[ಮಾ. 06] ಪಕ್ಷ ಹೇಳಿದರೇ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಸಚಿವೆ ಜಯಮಾಲಾ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಜಯಮಾಲಾ ಲೋಕ ಕಣಕ್ಕೆ ಧುಮುಕಲು ಸಿದ್ಧ ಎಂದರು.
ಜಯಮಾಲಾ ಹೇಳಿಕೆ ಸಹಜವಾಗಿಯೇ ಕುತೂಹಲ ತಂದಿದೆ. ವಿಧಾನ ಪರಿಷತ್ ಸದಸ್ಯೆಯಾಗಿರುವ ಜಯಮಾಲಾ ರಾಜ್ಯದ ದೋಸ್ತಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.
ಸುಮಲತಾ v/s ನಿಖಿಲ್: ಸ್ಯಾಂಡಲ್‌ವುಡ್ ಸ್ಟಾರ್‌ಗಳಿಗೆ ಶುರುವಾಗಿದೆ ಸಂಕಷ್ಟ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಮಾತು ಬಂದಾಗ ಜಯಮಾಲಾ ಅವರ ಸ್ಥಾನಕ್ಕೆ ಕುತ್ತು ಬಂತು ಎಂದೇ ವ್ಯಾಖ್ಯಾನ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಜಯಮಾಲಾ ಲೋಕ ಕದನದ ಮಾತು ಹೇಳಿದ್ದಾರೆ. ಒಂದು ವೇಳೆ ಲೋಕ ಟಿಕೆಟ್ ಸಿಕ್ಕರೆ ಜಯಮಾಲಾ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲವೂ ಹೆಚ್ಚಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.