ಕಾಂಗ್ರೆಸ್‌ ಶಾಸಕರು ಶಿಫ್ಟ್‌

Published : Jul 19, 2019, 09:22 AM IST
ಕಾಂಗ್ರೆಸ್‌ ಶಾಸಕರು ಶಿಫ್ಟ್‌

ಸಾರಾಂಶ

ಕರ್ನಾಟಕ ರಾಜಕೀಯ ಪ್ರಹಸನ ಮುಂದುವರಿದಿದೆ. ವಿಶ್ವಾಸ ಮತಕ್ಕೆ ಡೆಡ್ ಲೈನ್ ನೀಡಲಾಗಿದೆ. ಇದೇ ವೇಳೆ ಕಾಂಗ್ರೆಸ್ ಶಾಸಕರನ್ನು ಶಿಫ್ಟ್ ಮಾಡಲಾಗಿದೆ. 

ಬೆಂಗಳೂರು [ಜು.19] : ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ನಿರ್ಣಯ ಈಗಾಗಲೇ ಸದನದಲ್ಲಿ ಮಂಡನೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ತಮ್ಮ ಶಾಸಕರನ್ನು ತಾಜ್‌ ವಿವಾಂತ ಹೋಟೆಲ್‌ಗೆ ಸ್ಥಳಾಂತರಿಸಿದೆ. 

ಕಳೆದ ಹಲವು ದಿನಗಳಿಂದ ತಾಜ್‌ ವಿವಾಂತ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಶಾಸಕರನ್ನು ದೇವನಹಳ್ಳಿಯ ಪ್ರಕೃತಿ ವಿಂಡ್‌ ಫ್ಲವರ್‌ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿತ್ತು. 

ಗುರುವಾರ ಅಧಿವೇಶನಕ್ಕೆ ಶಾಸಕರನ್ನು ನೇರವಾಗಿ ರೆಸಾರ್ಟ್‌ನಿಂದಲೇ ಕರೆ ತರಲಾಗಿತ್ತು. ಗುರುವಾರ ಮಂಡನೆ ಮಾಡಿರುವ ವಿಶ್ವಾಸ ಮತ ಯಾಚನೆ ನಿರ್ಣಯವು ಶುಕ್ರವಾರ ಪ್ರಮುಖ ಘಟ್ಟತಲುಪುವ ನಿರೀಕ್ಷೆ ಇದೆ. ಹೀಗಾಗಿ ಪ್ರಕೃತಿ ವಿಂಡ್‌ ಫ್ಲವರ್‌ಗೆ ಹೋಲಿಸಿದರೆ ವಿಧಾನಸೌಧಕ್ಕೆ ಸಮೀಪದಲ್ಲಿರುವ ತಾಜ್‌ ವಿವಾಂತ ಹೊಟೇಲ್‌ಗೆ ಶಾಸಕರ ವಾಸ್ತವ್ಯ ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!