ಈ ಕಾರಣ ನೀಡಿ ವಿಶ್ವಾಸಮತ ಮುಂದೂಡಿಕೆ?

Published : Jul 22, 2019, 07:19 AM IST
ಈ ಕಾರಣ ನೀಡಿ ವಿಶ್ವಾಸಮತ ಮುಂದೂಡಿಕೆ?

ಸಾರಾಂಶ

ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯತ್ತಿರುವ ಪ್ರಹಸನ ಇನ್ನಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಎದ್ದು ಕಾಣುತ್ತಿದೆ. ಕೆಲ ಕಾರಣ ನೀಡಿ ವಿಶ್ವಾಸಮತ ಮುಂದೂಡುವ ಸಾಧ್ಯತೆ ಇದೆ. 

ಬೆಂಗಳೂರು[ಜು.22] :  ಕಳೆದ ಗುರುವಾರ ಮಂಡನೆಯಾಗಿದ್ದ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಸೋಮವಾರ ವಿಧಾನಸಭೆಯಲ್ಲಿ ಮುಂದುವರೆಯಲಿದ್ದು, ಸೋಮವಾರವೇ ಮುಗಿಯುತ್ತ ದೆಯೇ ಅಥವಾ ಮತ್ತೆ ಮುಂದೂಡಿಕೆಯಾಗಲಿದೆಯೇ ಎಂಬುದು ಕುತೂಹಲಕರವಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸಮತ ಯಾಚನೆ ನಿರ್ಣಯದ ಮೇಲಿನ ಚರ್ಚೆಯನ್ನು ಸೋಮವಾರ ಅಂತ್ಯಗೊಳಿಸದೆ ಮುಂದೂಡುವ ಪ್ರಯತ್ನ ಆಡಳಿತಾರೂಢ ಪಕ್ಷಗಳಲ್ಲಿ ನಡೆಯುತ್ತಿದೆ.

ಬುಧವಾರದವರೆಗೆ ಚರ್ಚೆ ಮುಂದೂಡುವ ಕುರಿತು ತಾಂತ್ರಿಕ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಉಭಯ ಪಕ್ಷಗಳ ಉನ್ನತ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?