
ಮುಂಬೈ[ಜು.10]: ಬೆಂಗಳೂರಿನಿಂದ ಮುಂಬೈಗೆ ಶಿಫ್ಟ್ ಆಗಿದ್ದ ರಾಜ್ಯ ರಾಜಕರಣ ಸದ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಅತೃಪ್ತರು ಕೋರ್ಟ್ ಮೊರೆ ಹೋಗಿದ್ದಾರೆ.
"
ಸ್ಪೀಕರ್ ತಮ್ಮ ಕರ್ತವ್ಯ ನಿಭಾಯಿಸುತ್ತಿಲ್ಲ, ಸ್ಪೀಕರ್ ಪಕ್ಷಪಾತ ಮಾಡುತ್ತಿರೆ. 8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ ಎನ್ನುವುದಕ್ಕೆ ಏನು ಕಾರಣ? ಎಂದು ಪ್ರಶ್ನಿಸಿ ಅತೃಪ್ತರು ಸದ್ಯ ಸುಪ್ರೀಂ ಮೆಟ್ಟಿಲೇರಿದ್ದಾರೆ. ಅತೃಪ್ತರ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಲಿದ್ದು, ನಾಳೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆಯಾಗುವ ಸಾಧ್ಯತೆಗಳಿವೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ನ್ಯಾಯಪೀಠದ ಮುಂದೆ ತುರ್ತು ವಿಚಾರಣೆಗಾಗಿ ರೆಬೆಲ್ ಶಾಸಕರ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸದ್ಯ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗಳಾಗುತ್ತಿದ್ದು, ಅತೃಪ್ತರ ಈ ಹೆಜ್ಜೆಯಿಂದ ಸ್ಪೀಕರ್ ಮೇಲೆ ಒತ್ತಡ ಬೀಳಲಿದೆ ಎಂಬುವುದರಲ್ಲಿ ಅನುಮಾನವಿಲ್ಲ. ಒಂದು ವೇಳೆ ರಾಜಕೀಯ ತಿಕ್ಕಾಟಕ್ಕೆ ಯಾವುದೇ ಪರಿಹಾರ ಸಿಗದಿದ್ದಲ್ಲಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.