ಬಿಜೆಪಿ ನಾಯಕರಿಗೆ ಗುಡ್ ಲಕ್ ಎಂದ ಸಿದ್ದರಾಮಯ್ಯ!

Published : Jul 23, 2019, 11:55 AM ISTUpdated : Jul 23, 2019, 12:42 PM IST
ಬಿಜೆಪಿ ನಾಯಕರಿಗೆ ಗುಡ್ ಲಕ್ ಎಂದ ಸಿದ್ದರಾಮಯ್ಯ!

ಸಾರಾಂಶ

ಬಿಜೆಪಿ ನಾಯಕರಿಗೆ ಗುಡ್ ಲಕ್ ಎಂದ ಸಿದ್ದರಾಮಯ್ಯ| ವಿಧಾನಸೌಧದಲ್ಲಿ ಮುಖಾಮುಖಿಯಾದ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರು| ದೋಸ್ತಿ ಸರ್ಕಾರ ಪತನ?

ಬೆಂಗಳೂರು[ಜು.23]: ರಾಜ್ಯ ರಾಜಕೀಯ ಹೈಡ್ರಾಮಾ ಮೂರು ವಾರಗಳಾದರೂ ಕೊನೆಯಾಗಿಲ್ಲ. ದೋಸ್ತಿ ನಾಯಕರು ಒಂದೆಡೆ ಮುಂಬೈ ಬಿಟ್ಟು ಮರಳಿ ಬರಲು ಕೆಳುತ್ತಿಲ್ಲ. ಇತ್ತ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಮಂಡಿಸಲು ಮತ್ತಷ್ಟು ವಿಳಂಬ ಮಾಡುತ್ತಿದ್ದಾರೆ. ಹೀಗಿರುವಾಗ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಗುಡ್ ಲಕ್ ಎಂದು ಹೇಳಿರುವ ಪ್ರಸಂಗ ನಡೆದಿದೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೌದು ವಿಧಾನಸೌಧದಲ್ಲಿ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರು ಮುಖಾಮುಖಿಯಾಗಿದ್ದರು. ಈ ವೇಳೆ ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕೈಕುಲುಕಿದ ಸಿದ್ದರಾಮಯ್ಯ ಗುಡ್ ಲಕ್ ಎಂದಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮಾತುಗಳು ಭಾರೀ ಸದ್ದು ಮಾಡುತ್ತಿವೆ. ಹೀಗಿರುವಾಗ ಸಿದ್ದರಾಮಯ್ಯ ಬಿಜೆಪಿ ನಾಯಕರ ಕೈ ಕುಲುಕಿರುವುದು ಸರ್ಕಾರ ಪತನಗೊಳ್ಳುವುದು ಖಚಿತವೆಂಬಂತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!