
ಬೆಂಗಳೂರು[ಜು.16]: ಸಂವಿಧಾನಬದ್ಧ ಪೀಠದಲ್ಲಿ ಕುಳಿತು ಮಹಿಳೆಯರು ಮತ್ತು ಕಲಾವಿದರ ಬಗ್ಗೆ ಲಘುವಾಗಿ ಮಾತನಾಡುವ ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಟುವಾಗಿ ಟೀಕಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕೂರುವ ಪೀಠದ ನೆತ್ತಿ ಮೇಲೆ ರಾಷ್ಟ್ರದ ಲಾಂಛನವಿರುತ್ತದೆ. ಆ ಗೌರವಕ್ಕೆ ತಕ್ಕಂತೆ ಅವರು ನಡೆದುಕೊಳ್ಳಬೇಕು. ತಕ್ಷಣವೇ ಅವರು ನೃತ್ಯಗಾರರು ಹಾಗೂ ಕಲಾವಿದರಲ್ಲಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
'ಯಾರನ್ನೋ ಖುಷಿ ಪಡಿಸಲು ನಾನು ಡಾನ್ಸರ್ ಅಲ್ಲ'
ಸ್ಪೀಕರ್ ಪೀಠದಲ್ಲಿ ಕುಳಿತು ಎರಡ್ಮೂರು ಬಾರಿ ಅಸಂವಿಧಾನಾತ್ಮಕ ಪದ ಬಳಸಿದ್ದಾರೆ. ಈಗ ವೇಶ್ಯೆಯರ ಬಗ್ಗೆ ಲಘುವಾಗಿ ಮಾತನಾಡಿದ್ದರು. ಇದೀಗ ತಾವು ನೃತ್ಯಗಾರ್ತಿ ಅಲ್ಲ ಎಂದು ಹಗುರವಾಗಿ ಹೇಳಿಕೆ ನೀಡುವ ಮೂಲಕ ನೃತ್ಯಗಾರರಿಗೆ, ಯಕ್ಷಗಾನ ಹಾಗೂ ಭರತನಾಟ್ಯ ಕಲಾವಿದರಿಗೆ ಅವಮಾನಿಸಿದ್ದಾರೆ ಎಂದು ಕಿಡಿಕಾರಿದರು.
ದೇಶದಲ್ಲಿ ಭರತ ನಾಟ್ಯ, ಯಕ್ಷಗಾನ ಹಾಗೂ ಕಥಕ್ಕಳಿ ಕಲಾವಿದರು ತಮ್ಮ ಕಲಾ ಪ್ರತಿಭೆ ಮೂಲಕ ದೇವರನ್ನು ಒಲಿಸಿಕೊಂಡವರಿದ್ದಾರೆ. ಈ ನೃತ್ಯದ ಬಗ್ಗೆ ಅವಹೇಳನಕಾರಿಯಾಗಿ ಆ ಪೀಠದಲ್ಲಿ ಕುಳಿತು ಮಾತನಾಡುತ್ತಿರೋದು ಮಾನಸಿಕತೆಯನ್ನು ತೋರಿಸುತ್ತದೆ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕೇವಲ ಒಂದೇ ವರ್ಷದ ಅವಧಿಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಮಹಾಘಟಬಂಧನ್ ವೈಫಲ್ಯವನ್ನು ಕಂಡಿದೆ. ರಾಜ್ಯದ ಜನರು ಮತ್ತು ಶಾಸಕರ ವಿಶ್ವಾಸ ಕಳೆದುಕೊಂಡಿರುವ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡುವುದು ಒಂದೇ ದಾರಿ. ಅವರು ಪದ ತ್ಯಾಗ ಮಾಡಿ ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು. ಇದು ಜನರ ಮತ್ತು ಶಾಸಕರ ಅಗ್ರಹವಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.