
ಬೆಂಗಳೂರು[ಜು.11]: ಕಳೆದೊಂದು ವಾರದಿಂದ ನಡೆಯುತ್ತಿರುವ ರಾಜ್ಯ ರಾಜಕೀಯದ ಹೈಡ್ರಾಮಾಗೆ ಇಂದು ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆಗಳಿವೆ. ಶಾಸಕರ ಸರಣಿ ರಾಜೀನಾಮೆಯಿಂದ ಕಂಗೆಟ್ಟ ದೋಸ್ತಿ ಸರ್ಕಾರ ಪತನದಂಚಿಗೆ ತಲುಪಿದೆ. ಮೈತ್ರಿ ನಾಯಕರು ಅತೃಪ್ತರ ಮನವೊಲಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನಡುವೆ ಇಂದು ಸಂಪುಟ ಸಭೆ ನಡೆಯಲಿದ್ದು, ಕೊನೆಯ ಪ್ರಯತ್ನವೆಂಬಂತೆ ದೋಸ್ತಿ ನಾಯಕರು ಸರ್ಕಾರ ಉಳಿಸಿಕೊಳ್ಳಲು ಪಂಚಸೂತ್ರ ಳವಡಿಸಿಕೊಳ್ಳುವ ಸಾಧ್ಯತೆಗಳಿವೆ.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೌದು ಕಾಂಗ್ರೆಸ್ ಜೆಡಿಎಸ್ ನಾಯಕರು ಕೊನೆ ಕ್ಷಣದಲ್ಲೂ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಮೈತ್ರಿಗೆ ಮರು ಜೀವ ನೀಡಲು ದೋಸ್ತಿ ನಾಯಕರ ಮೆಗಾಪ್ಲ್ಯಾನ್ ರಚಿಸಿದ್ದಾರೆ. ಕೆಕೆ ಗೆಸ್ಟ್ ಗೌಸ್ನಲ್ಲಿ ಕಾಂಗ್ರೆಸ್- ಜೆಡಿಎಸ್ ನಾಯಕರ ಅಂತಿಮ ಸಭೆಯಲ್ಲಿ ಪಂಚತಂತ್ರ ಹೆಣೆಯಲಾಗಿದೆ. ಸ್ಪೀಕರ್ ಕುರಿತಾಗಿ ಸುಪ್ರೀಂಕೋರ್ಟ್ ತೀರ್ಪಿಗೂ ಮುನ್ನ ದೋಸ್ತಿ ವಾರ್ ರೂಂನಲ್ಲಿ ರೂಪಿಸಿರುವ ಈ ರಣತಂತ್ರ ಅನುಸರಿಸುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿವೆ.
ದೋಸ್ತಿ ಪಂಚತಂತ್ರ
ಸೂತ್ರ : 1 ಕಾಂಗ್ರೆಸ್ ಗೆ ಅಧಿಕಾರ ಬಿಟ್ಟುಕೊಡುವುದು
ಸೂತ್ರ: 2 ಸಿದ್ದರಾಮಯ್ಯ ಮುಖ್ಯಂಂತ್ರಿ , ಎಚ್.ಡಿ. ರೇವಣ್ಣ ಡಿಸಿಎಂ
ಸೂತ್ರ : 3 ಮೈತ್ರಿ ಸರ್ಕಾರವನ್ನೇ ವಿಸರ್ಜನೆ ಮಾಡುವುದು
ಸೂತ್ರ :4 ಎಲ್ಲ ಬಂಡಾಯ ಶಾಸಕರನ್ನು ಅನರ್ಹಗೊಳಿಸುವುದು
ಸೂತ್ರ : 5 ಜೆಡಿಎಸ್-ಕಾಂಗ್ರೆಸ್ ಎಲ್ಲ ಶಾಸಕರು ರಾಜೀನಾಮೆ ಕೊಟ್ಟು ಮಧ್ಯಂತರ ಚುನಾವಣೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.