ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ: ದೋಸ್ತಿಗೆ ಗುಡ್ ಬೈ, ಪ್ರತಿಪಕ್ಷದಲ್ಲಿ ಕಾಂಗ್ರೆಸ್?

By Web DeskFirst Published Jul 9, 2019, 11:46 AM IST
Highlights

ಪ್ರತಿಪಕ್ಷದಲ್ಲಿ ಕುಳಿತುಕೊಳ್ಳೋಣ..!| ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡೋಣ| ಸಿದ್ದರಾಮಯ್ಯ ನೇತೃತ್ವದಲ್ಲೇ ಪಕ್ಷ ಸಂಘಟಿಸೋಣ

ಬೆರಂಗಳೂರು[ಜು.09]: ಕರ್ನಾಟಕ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳಾಗುತ್ತಿದ್ದು, ಈ ಹೈಡ್ರಾಮಾ ಲೋಕಸಭೆಯಲ್ಲೂ ಸದ್ದು ಮಾಡಿದೆ. ಕಳೆದೊಂದು ವಾರದಿಂದ ನಡೆಯುತ್ತಿರುವ ರಾಜೀನಾಮೆ ಪರ್ವ ದೋಸ್ತಿ ಸರ್ಕಾರಕ್ಕೆ ಕಂಟಕವಾಗುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿವೆ. ಹೀಗಿರುವಾಗ ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತ ಕೈ ನಾಯಕರು ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡಲು ಸಜ್ಜಾಗಿದ್ದಾರೆ. 

"

ಆನಂದ್ ಸಿಂಗ್ ರಾಜೀನಾಮೆಯಿಂದ ಶುರುವಾದ ರಾಜಕೀಯ ನಾಟಕದಿಂದ ಬೇಸತ್ತ ಕಾಂಗ್ರೆಸ್ ನಾಯಕರು 'ಪ್ರತಿಪಕ್ಷದಲ್ಲಿ ಕುಳಿತುಕೊಳ್ಳೋಣ, ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡೋಣ. ಸಿದ್ದರಾಮಯ್ಯ ನೇತೃತ್ವದಲ್ಲೇ ಪಕ್ಷ ಸಂಘಟಿಸೋಣ' ಎಂದು ಸಿಎಲ್ಪಿ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಲ್ಲದೇ 'ಇದುವರೆಗೆ ಆಗಿರುವ ಹೈಡ್ರಾಮಾಗಳೇ ಸಾಕು. ಸರ್ಕಾರ ಉಳಿಸಿಕೊಳ್ಳಲು ಹೋರಾಡಿದ್ದು ಸಾಕು. ಸಮಯ ಒಲಿದು ಬಂದಿದೆ, ಬಿಟ್ಟುಕೊಡುವುದು ಬೇಡ. ದೋಸ್ತಿ ಮುಂದುವರೆದರೆ ಪಕ್ಷಕ್ಕೆ ಡ್ಯಾಮೇಜ್ ಆಗುವುದರಲ್ಲಿ ಅನುಮಾನವಿಲ್ಲ. ನಾವು ಇನ್ನು ದೋಸ್ತಿ ಸಹಿಸಿಕೊಂಡು ಇರುವುದು ಬೇಡ ಎಂದು ಒಕ್ಕೊರಲಿನಿಂದ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
 

click me!