Breaking News: ಡಿಕೆಶಿ ಸಚಿವ ಸ್ಥಾನ ಪಕ್ಕಾ..! ಜಾರ್ಜ್’ಗಿಲ್ಲ ನಗರಾಭಿವೃದ್ದಿ ಖಾತೆ..?

First Published Jun 5, 2018, 10:46 PM IST
Highlights

ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದ ಜಾರ್ಜ್ ಅವರಿಗೆ ಆ ಖಾತೆ ಕೈ ತಪ್ಪುವ ಸಾಧ್ಯತೆ ಹೆಚ್ಚಾಗಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್’ಗೆ ಗೃಹಖಾತೆ ಜತೆಗೆ ಹೆಚ್ಚುವರಿಯಾಗಿ ಬೆಂಗಳೂರು ನಗರಾಭಿವೃದ್ದಿ ಖಾತೆ ಸಿಗಲಿದೆ ಎಂದು ಸುವರ್ಣನ್ಯೂಸ್’ಗೆ ಕಾಂಗ್ರೆಸ್’ನ ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು[ಜೂ.05]: ಕೆ.ಜೆ ಜಾರ್ಜ್’ಗೆ ಬೆಂಗಳೂರು ನಗರಾಭಿವೃದ್ದಿ ಖಾತೆ ಸಿಗುವ ಸಾಧ್ಯತೆಗಳಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದ ಜಾರ್ಜ್ ಅವರಿಗೆ ಆ ಖಾತೆ ಕೈ ತಪ್ಪುವ ಸಾಧ್ಯತೆ ಹೆಚ್ಚಾಗಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್’ಗೆ ಗೃಹಖಾತೆ ಜತೆಗೆ ಹೆಚ್ಚುವರಿಯಾಗಿ ಬೆಂಗಳೂರು ನಗರಾಭಿವೃದ್ದಿ ಖಾತೆ ಸಿಗಲಿದೆ ಎಂದು ಸುವರ್ಣನ್ಯೂಸ್’ಗೆ ಕಾಂಗ್ರೆಸ್’ನ ಉನ್ನತ ಮೂಲಗಳು ತಿಳಿಸಿವೆ. ಸಚಿವರ ಪಟ್ಟಿಯಲ್ಲಿ ಜಾರ್ಜ್ ಹೆಸರಿದ್ದು ಅವರಿಗೆ ಯಾವ ಖಾತೆ ಸಿಗಲಿದೆ ಎನ್ನುವುದು ಸಾಕಷ್ಟು ಕುತೂಹಲಕ್ಕೀಡು ಮಾಡಿಕೊಟ್ಟಿದೆ.
ಇನ್ನು ಮಾಜಿ ಇಂಧನ ಸಚಿವ ಡಿ.ಕೆ ಶಿವಕುಮಾರ್’ಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಸಚಿವರ ಪಟ್ಟಿಯನ್ನು ಫೈನಲ್ ಮಾಡಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಒಟ್ಟು 17 ಜನ ಕಾಂಗ್ರೆಸ್ ಶಾಸಕರು ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಕೆ.ಜೆ ಜಾರ್ಜ್, ರೋಷನ್ ಬೇಗ್, ಕೃಷ್ಣ ಭೈರೇಗೌಡ, ಎಂಬಿ ಪಾಟೀಲ್, ರಾಜಶೇಖರ ಪಾಟೀಲ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ, ರೂಪಾ ಶಶಿಧರ್ ಸೇರಿದಂತೆ 17 ಶಾಸಕರಿಗೆ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ.

click me!