
ಬೆಂಗಳೂರು[ಜು.25] ಅಂತೂ ಇಂತು ಪಿಯು ಉಪನ್ಯಾಸಕರಿಗೆ ವರ್ಗಾವಣೆ ಭಾಗ್ಯ ಕೂಡಿ ಬಂದಿದೆ. ದ್ವಿತೀಯ ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ವರ್ಗಾವಣೆ ಪ್ರಕ್ರಿಯೆ ಕುರಿತು ಆದೇಶ ಹೊರಡಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಜುಲೖ 26 ರಿಂದ ಆಗಸ್ಟ್ 4 ರವರಿಗೆ ವಿಷಯವಾರು ಉಪನ್ಯಾಸಕರ ಕೌನ್ಸಿಲಿಂಗ್ ನಡೆಯಲಿದೆ.. ಕೌನ್ಸಿಲಿಂಗ್ ವೇಳೆ ಉಪನ್ಯಾಸಕರು ಕಡ್ಡಾಯವಾಗಿ ಐಡಿ ಕಾರ್ಡ್ ಹಾಗೂ ಮೂಲ ಪ್ರಮಾಣ ಪತ್ರವನ್ನ ಹಾಜರು ಪಡಿಸಬೇಕು ಎಂದು ತಿಳಿಸಿದೆ.
ಈಗಾಗಲೇ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಸಂಬಂಧ ಜಿಲ್ಲಾ ಉಪನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ಎಲ್ಲರ ಮನವಿ ಮತ್ತು ಆಯ್ಕೆ ಆಧರಿಸಿ ಪಾರದರ್ಶಕ ವರ್ಗಾವಣೆ ಮಾಡುತ್ತೇವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.