ಹವಾಮಾನ ಇಲಾಖೆಯಿಂದ ಭಾರೀ ಮಳೆ ಎಚ್ಚರಿಕೆ : ಎಲ್ಲೆಲ್ಲಿ?

By Web DeskFirst Published Sep 18, 2018, 1:26 PM IST
Highlights

ಮುಂದಿನ ತಿಂಗಳು ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಮಳೆ ಸುರಿಯಲಿದ್ದು ಮುಂದಿನ ತಿಂಗಳು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ  ಉತ್ತಮ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

ಬೆಂಗಳೂರು :  ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಅತಿ ಹೆಚ್ಚು ಮಳೆ ಈಗಾಗಲೇ ಆರಂಭವಾಗಿದ್ದು, ಬೆಂಗಳೂರಲ್ಲಿ ಇನ್ನೂ ನಾಲ್ಕು ದಿನ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ.  

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆ ಆಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಈ ಬಾರಿ ಅತಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. 

ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ಬಿಜಾಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಹಲವೆಡೆ ಭಾರೀ ಮಳೆ ಆಗಲಿದೆ. ಈ ವಾರದಿಂದಲೇ ಉತ್ತರ ಕರ್ನಾಟಕದಲ್ಲಿ ಭಾರೀ ಪ್ರಮಾಣದ ಮಳೆ ಆಗಲಿದೆ. ಒಟ್ಟು 2 ತಿಂಗಳ ಕಾಲ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ  ಇಲಾಖೆ ನಿರ್ದೇಶಕ ವಿಜ್ಞಾನಿ ಚನ್ನಬಸವ ಹೇಳಿದ್ದಾರೆ.

click me!