ರಾಜ್ಯದಲ್ಲಿ 4 ದಿನಗಳ ಕಾಲ ಮತ್ತೆ ಮಳೆ : ಎಲ್ಲೆಲ್ಲಿ?

By Web DeskFirst Published Sep 16, 2018, 8:00 AM IST
Highlights

ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ತಣ್ಣಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಆರಂಭಿಸಿದ್ದಾನೆ. ಸೆಪ್ಟೆಂಬರ್  22 ರಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಸೆ.22  ರಿಂದ 25 ರವರೆಗೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗಲಿದ್ದು, ಹೆಚ್ಚು ಅಥವಾ ಭಾರಿ  ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಮುನ್ಸೂಚನೆ ನೀಡಲಗಿದೆ. 

ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ಪ್ರಕಾರ, ಸೆ. 22 ರಿಂದ ರಾಜ್ಯದ ಒಳನಾಡು ಭಾಗದಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

‘ಮುಂಗಾರು ಮುಕ್ತಾಯದ ಹಂತಕ್ಕೆ ಬಂದಿರುವುದರಿಂದ ಹಿಂಗಾರು ಆರಂಭಕ್ಕೆ ಈ ಮಳೆ ಪೂರಕವಾಗಲಿದ್ದು, ಅಕ್ಟೋಬರ್ ಮೊದಲ ವಾರ ರಾಜ್ಯದಲ್ಲಿ ಹಿಂಗಾರು ಪ್ರಾರಂಭವಾಗುವ ನಿರೀಕ್ಷೆ ಇದೆ’ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಪ್ರಭು ತಿಳಿಸಿದ್ದಾರೆ. ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗಿತ್ತು, ಈಗ ಮತ್ತೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಕಂಡು ಬರುತ್ತಿದ್ದು, ತಾಪಮಾನದ ಪ್ರಮಾಣ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

click me!