
ಬೆಂಗಳುರು, [ಅ.30]: ಕರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು[ಮಂಗಳವಾರ] ಪ್ರಕಟಿಸಿದೆ.
ತಾತ್ಕಾಲಿಕ ವೇಳಾಪಟ್ಟಿಯಂತೆ 2019ರ ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4ಕ್ಕೆ ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಳ್ಳಲಿದೆ. ಅಲ್ಲದೇ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ಇದೇ ನವೆಂಬರ್ 26ರ ಒಳಗಡೆ ಸಲ್ಲಿಸಬೇಕು ಎಂದು ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ತಿಳಿಸಿದೆ.
ದ್ವಿತಿಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ವಿದ್ಯಾರ್ಥಿಗಳು ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಬೇಕಾದರೆ, ನೇರವಾಗಿ ಕರ್ನಾಟಕ ಶಿಕ್ಷಣಾ ಮಂಡಳಿ ಇಲಾಖೆಗೆ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಬಹುದು.
ತಾತ್ಕಾಲಿಕ ವೇಳಾಪಟ್ಟಿ ಇಂತಿದೆ
ಮಾರ್ಚ್ 21 – ಪ್ರಥಮ ಭಾಷೆ
ಮಾರ್ಚ್ 23 – ಕೋರ್ ಸಬ್ಜೆಕ್ಟ್,
ಮಾರ್ಚ್ 25 – ಗಣಿತ
ಮಾರ್ಚ್ 27 – ದ್ವಿತೀಯ ಭಾಷೆ
ಮಾರ್ಚ್ 29 – ವಿಜ್ಞಾನ
ಏಪ್ರಿಲ್ 2 – ಸಮಾಜ ವಿಜ್ಞಾನ
ಏಪ್ರಿಲ್ 4 – ತೃತೀಯ ಭಾಷೆ.
ಇನ್ನಷ್ಟು ಮಾಹಿತಿ ಬೇಕಿದ್ದಲ್ಲಿ ಕಚೇರಿಯ ಅಧಿಕೃತ ವೆಬ್ ಸೈಟ್‌ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.