
ಆಲಮಟ್ಟಿ[ಆ.18]: ಉಗ್ರರು ದಾಳಿ ನಡೆಯಬಹುದು ಎಂಬ ಕೇಂದ್ರ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯ, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ದೇವಸ್ಥಾನ, ಕರಾವಳಿ ಪ್ರದೇಶಗಳಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನ ಬಂದ ಕಡೆ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಕೆಆರ್‌ಎಸ್ ಅಣೆಕಟ್ಟೆಯ ಸೇತುವೆಯ ಮೇಲೆ ಯಾರನ್ನೂ ಬಿಡುತ್ತಿಲ್ಲ. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಆಲಮಟ್ಟಿಯಲ್ಲಿ ಬಾಂಬ್ ಪತ್ತೆ ದಳಗಳು ಬೀಡುಬಿಟ್ಟಿವೆ. ಹಲವು ಬಾರಿ ತಪಾಸಣೆ ನಡೆಸುತ್ತಿದ್ದಾರೆ.
ಜಲಾಶಯದ ಬಳಿಗೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ. ದಿನದ 24 ಗಂಟೆಯೂ ಸರದಿ ಪ್ರಕಾರ ಜಲಾಶಯದ ಭದ್ರತೆಯ ಪರಿಶೀಲನೆ ನಡೆಸಲಾಗುತ್ತಿದೆ. ಪ್ರವಾಸಿ ಸ್ಥಳಗಳಲ್ಲಿ, ದೇವಸ್ಥಾನಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ವಿದೇಶಿ ಅಥವಾ ಸಂಶಯಾಸ್ಪದ ಬೋಟ್ ಸಂಚರಿಸುತ್ತಿದ್ದರೆ ತಿಳಿಸುವಂತೆ ಮೀನುಗಾರರಿಗೆ ಇಲಾಖೆ ಸೂಚನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.