ಪ್ರಯಾಣ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದ ಸಾರಿಗೆ ಸಚಿವ!

By Web DeskFirst Published May 25, 2019, 9:55 PM IST
Highlights

ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಅನ್ನೋ ಸುದ್ದಿಗೆ ಸಾರಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ. 
 

ಬೆಂಗಳೂರು(ಮೇ.25): ಲೋಕಸಭಾ ಚುನಾವಣೆ ಫಲಿತಾಂಶದ  ಬೆನ್ನಲ್ಲೇ KSRTC ಸೇರಿದಂತೆ ಎಲ್ಲಾ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯಾಗಲಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಈ ಕುರಿತು ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ವದಂತಿಗೆ ಕಿವಿಗೊಡಬೇಡಿ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.

 

ಪ್ರಯಾಣ ದರ 20% ಏರಿಕೆಯಾಗುವುದಾಗಿ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದು, ಆ ರೀತಿಯ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರುವುದಿಲ್ಲ. ವಿಷಯವೇ ಚರ್ಚೆಯಾಗಿರುವುದಿಲ್ಲ,‌ ಆದ್ದರಿಂದ ತಪ್ಪು ಸುದ್ದಿಗಳನ್ನು ಪ್ರಕಟಿಸದಂತೆ ಕೋರಲಾಗಿದೆ.

— ಡಿ.ಸಿ. ತಮ್ಮಣ್ಣ ಸಾರಿಗೆ ಸಚಿವರು (@dctsarige)

 

ಡೀಸೆಲ್ ದರ ಏರಿಳಿತದಿಂದಾಗಿ ಸಾರಿಗೆ ಸಂಸ್ಥೆಗೆ ಈವರೆಗೆ 100 ಕೋಟಿ ರೂ.ನಷ್ಟವಾಗಿದೆ.  ಬಸ್ ಪ್ರಯಾಣ ದರ ಏರಿಸದಿದ್ದರೆ ಸಾರಿಗೆ ಸಂಸ್ಥೆಗಳು ನಷ್ಟಕ್ಕೆ ಸಿಲುಕಲಿವೆ. ಹೀಗಾಗಿ  ಪ್ರಯಾಣ ದರವನ್ನು ಶೇ. 20ರಷ್ಟು ಹೆಚ್ಚಿಸಲು ಸಿಎಂ ಕುಮಾರಸ್ವಾಮಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅನ್ನೋ ಸುದ್ದಿ ಹಬ್ಬಿತ್ತು. ಇದೀಗ ಸಚಿವರೇ ಸ್ಪಷ್ಟನೆ ನೀಡಿದ್ದು, ಪ್ರಯಾಣ ದರ 20%  ಏರಿಕೆಯಾಗುವ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ.
 

click me!