ಮಾಧ್ಯಮ ಕ್ಷೇತ್ರಕ್ಕೆ ಏನೇನ್ ಬೇಕು? ಸಿಎಂಗೆ ಪತ್ರಕರ್ತರ ಬೇಡಿಕೆ ಪಟ್ಟಿ

By Web DeskFirst Published Aug 4, 2019, 8:57 PM IST
Highlights

ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿವಿಧ ಬೇಡಿಕೆಗಳ ಪೂರೈಕೆಗೆ ಮನವಿ ಸಲ್ಲಿಸಿದೆ.

ಬೆಂಗಳೂರು[ಆ. 04] ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಪತ್ರಕರ್ತರ ಬೇಡಿಕೆಗಳ ಮನವಿ ಅರ್ಪಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೇಡಿಕೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದರು. ಪತ್ರಕರ್ತರ ಭವನ ಶಂಕುಸ್ಥಾಪನೆಗೆ ಆಗಮಿಸುವುದಾಗಿ ತಿಳಿಸಿದ ಅವರು, ಇನ್ನೂ ಅಗತ್ಯ ನೆರವು ನೀಡಲಾಗುವುದು ಎಂದರು.

ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮತ್ತೀಕೆರೆ ಜಯರಾಮ, ಪುಂಡಲೀಕ ಭೀ. ಬಾಳೋಜಿ, ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೋಕೇಶ, ಕಾರ್ಯದರ್ಶಿ ಸಂಜೀವ್ ಕುಮಾರ್ ಬಿ. ಕುಲಕರ್ಣಿ, IFWJ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಖಚಾಂಚಿ ಡಾ. ಕೆ.ಉಮೇಶ್ವರ ಹಾಗೂ ಕರ್ನಾಟಕ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ) ಮಾಜಿ ಅಧ್ಯಕ್ಷ, ಕನ್ನಡಪ್ರಭ ಸಂಪಾದಕೀಯ ಬಳಗದ ಬಿ.ವಿ.ಮಲ್ಲಿಕಾರ್ಜುನಯ್ಯ, ನಗರ ಘಟಕ ಅಧ್ಯಕ್ಷ ಸೋಮಶೇಖರ್ ಗಾಂಧಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘ ಇಟ್ಟ ಬೇಡಿಕೆಗಳು

1.  ಪತ್ರಕರ್ತರ ಭವನಕ್ಕೆ ಬೆಂಗಳೂರಿನ ಹೊಸಕೆರೆಹಳ್ಳಿ ಸಮೀಪ ಅರ್ಧ ಎಕರೆ ಜಮೀನು ನೀಡಿ 5 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಭವನ ನಿರ್ಮಾಣಕ್ಕೆ ಇನ್ನೂ 5 ಕೋಟಿ ರೂ. ಅನುದಾನ ನೀಡಬೇಕು.

ಕಾಲ್ ಆಫ್ ಡ್ಯೂಟಿ: ಪತ್ರಕರ್ತನ ರಿಪೋರ್ಟಿಂಗ್ ನಿಜಕ್ಕೂ ಬ್ಯೂಟಿ!

2. ಕಾರ್ಯನಿರತ ಪತ್ರಕರ್ತರ ಕಲ್ಯಾಣ ನಿಧಿಗೆ ಕನಿಷ್ಠ 50 ಕೋಟಿ ರೂ. ಅನುದಾನ ನೀಡಬೇಕು.

3. ಆಧುನಿಕಯುಗದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿ ಮಾಧ್ಯಮ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಬೇಕು.

 4.ಪತ್ರಕರ್ತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಪರಾಮರ್ಶಿಸಿ ದುರುದ್ದೇಶದಿಂದ ದಾಖಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು.

 

click me!