ವಾಯುಭಾರ ಕುಸಿತ : ರಾಜ್ಯದಲ್ಲಿ 3-4 ದಿನ ಮಳೆ ಸಾಧ್ಯತೆ

First Published May 19, 2018, 7:46 AM IST
Highlights

ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡು ಬರುತ್ತಿದ್ದು, ಇದರಿಂದ ರಾಜ್ಯದ ಹಲವೆಡೆ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
 

ಬೆಂಗಳೂರು : ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡು ಬರುತ್ತಿದ್ದು, ಇದರಿಂದ ರಾಜ್ಯದ ಹಲವೆಡೆ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯುಭಾರ ಕುಸಿತ ಸದ್ಯ ಸಮುದ್ರದ ಮೇಲೆ ಇದ್ದು, ಅದು ಮುಂದುವರೆದಂತೆ ಒಳನಾಡಿನ ಭಾಗಕ್ಕೆ ವ್ಯಾಪಿಸಬಹುದು. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಬಹುದು. ಸದ್ಯದ ಮಟ್ಟಿಗೆ ಮುಂದಿನ ಒಂದೆರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯ ನಿರೀಕ್ಷೆ ಇದೆ. 

ಪ್ರಮುಖವಾಗಿ ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಮೈಸೂರು, ಕೊಡಗು, ಹಾಸನ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳ ಹಲವೆಡೆ ಮೇ 19 ಮತ್ತು 20 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಹಲವೆಡೆ ಹಗುರ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 

ಈ ಮಧ್ಯೆ, ಅರಬ್ಬಿ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರುವುದರಿಂದ ಮೀನು ಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕೂಡ ಇಲಾಖೆ ಎಚ್ಚರಿಕೆ ನೀಡಿದೆ.

click me!