ಕರುಣಾನಿಧಿ ಆರೋಗ್ಯ ಮತ್ತಷ್ಟು ಗಂಭೀರ!

Published : Jul 29, 2018, 09:52 PM ISTUpdated : Jul 30, 2018, 12:16 PM IST
ಕರುಣಾನಿಧಿ ಆರೋಗ್ಯ ಮತ್ತಷ್ಟು ಗಂಭೀರ!

ಸಾರಾಂಶ

ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು ಮತ್ತಷ್ಟು ಹದಗೆಟ್ಟ ಕರುಣಾನಿಧಿ ಆರೋಗ್ಯ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೆಲವೇ ಕ್ಷಣಗಳಲ್ಲಿ ವೈದ್ಯರಿಂದ ಸುದ್ದಿಗೋಷ್ಠಿ ಚೆನ್ನೈ ನಗರಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಚೆನ್ನೈ(ಜು.29): ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಕರುಣಾನಿಧಿ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕರುಣಾನಿಧಿ ಕುಟುಂಬ ಆಸ್ಪತ್ರೆಗೆ ಧಾವಿಸಿದ್ದು, ತಮಿಳುನಾಡು ಸಿಎಂ ಪಳನಿಸ್ವಾಮಿ ಸೇಲಂ ಕಾರ್ಯಕ್ರಮ ರದ್ದುಗೊಳಿಸಿ ಚೆನ್ನೈನತ್ತ ಧಾವಿಸುತ್ತಿದ್ದಾರೆಎಂದು ಮೂಲಗಳು ತಿಳಿಸಿವೆ.

ಇನ್ನು ಕೆಲವೇ ಕ್ಷಣಗಳಲ್ಲಿ ಕಾವೇರಿ ಆಸ್ಪತ್ರೆ ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದು, ಕಾವೇರಿ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದೇ ವೇಳೇ ಇಡೀ ಚೆನ್ನೈ ನಗರಕ್ಕೂ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟ್ರಂಪ್ ನಿರ್ಧಾರಕ್ಕೆ 20 ರಾಜ್ಯಗಳ ಸೆಡ್ಡು: ಅಮೆರಿಕದಲ್ಲೇ ಶುರುವಾಯ್ತು ಸಮರ!
ನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ: ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ ಸ್ಥಾನ