ಕದಂಬ ನೌಕಾನೆಲೆಯಲ್ಲಿ ಬಿಗಿ ಭದ್ರತೆ, ಕಟ್ಟೆಚ್ಚರ

Published : Aug 05, 2019, 09:08 AM IST
ಕದಂಬ ನೌಕಾನೆಲೆಯಲ್ಲಿ  ಬಿಗಿ ಭದ್ರತೆ, ಕಟ್ಟೆಚ್ಚರ

ಸಾರಾಂಶ

ಕಾರವಾರ  ಐಎನ್‌ಎಸ್‌ ಕದಂಬ ನೌಕಾನೆಲೆಯಲ್ಲಿ ಭಾನುವಾರ ಭದ್ರತೆ ಹೆಚ್ಚಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ರಕ್ಷಣಾ ಇಲಾಖೆಯಿಂದ ತುರ್ತು ಸೂಚನೆ ಬಂದ ಹಿನ್ನೆಲೆಯಲ್ಲಿ ನೌಕಾನೆಲೆಯಲ್ಲಿ ಹಠಾತ್ತಾಗಿ ವ್ಯಾಪಕ ಭದ್ರತಾಕ್ರಮ ಕೈಗೊಳ್ಳಲಾಗಿದ್ದು, ಕಾರಣ ತಿಳಿದುಬಂದಿಲ್ಲ.    

ಕಾರವಾರ (ಆ. 05): ಇಲ್ಲಿನ ಐಎನ್‌ಎಸ್‌ ಕದಂಬ ನೌಕಾನೆಲೆಯಲ್ಲಿ ಭಾನುವಾರ ಭದ್ರತೆ ಹೆಚ್ಚಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ರಕ್ಷಣಾ ಇಲಾಖೆಯಿಂದ ತುರ್ತು ಸೂಚನೆ ಬಂದ ಹಿನ್ನೆಲೆಯಲ್ಲಿ ನೌಕಾನೆಲೆಯಲ್ಲಿ ಹಠಾತ್ತಾಗಿ ವ್ಯಾಪಕ ಭದ್ರತಾಕ್ರಮ ಕೈಗೊಳ್ಳಲಾಗಿದ್ದು, ಕಾರಣ ತಿಳಿದುಬಂದಿಲ್ಲ.

ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಬಿಗಿ ಭದ್ರತೆ ಕೈಗೊಳ್ಳಲಿದ್ದು, ನೌಕಾನೆಲೆ ಪ್ರವೇಶದ್ವಾರದಲ್ಲೂ ಹದ್ದಿನಕಣ್ಣು ಇಡಲಾಗಿದೆ. ಈ ಎರಡು ದಿನಗಳ ಕಾಲ ನೌಕಾನೆಲೆಗೆ ಗಣ್ಯರು ಹಾಗೂ ಅತಿಥಿಗಳ ಭೇಟಿಯನ್ನೂ ನಿರ್ಬಂಧಿಸಲಾಗಿದೆ.

ಪೂರ್ವನಿಗದಿತ ಭೇಟಿಯನ್ನೂ ರದ್ದುಗೊಳಿಸಲಾಗಿದ್ದು, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಆದರೆ, ಈ ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ