
ಬೆಂಗಳೂರು(ಮೇ 24): ಅನುರಾಗ್ ತಿವಾರಿ ಸಾವು ಪ್ರಕರಣದಲ್ಲಿ ಕರ್ನಾಟಕದ ಐಎಎಸ್ ಮಾಫಿಯಾ ಕೈವಾಡ ಇದೆ ಎಂಬ ಆರೋಪ ಕೇಳಿಬರುತ್ತಿರುವ ಮಧ್ಯೆಯೇ ಇದೀಗ ಕೆಲ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು ನಾಲ್ವರು ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬಿಬಿಎಂಪಿಯಲ್ಲಿ ಕೆಲ ಅವ್ಯವಹಾರಗಳನ್ನು ಬಯಲಿಗೆಳೆದಿದ್ದಕ್ಕೆ ಈ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮಥಾಯಿ ಆರೋಪಿಸಿದ್ದಾರೆ.
ದೂರು ದಾಖಲಿಸಲಾದ ಅಧಿಕಾರಿಗಳು:
1) ಡಾ. ಕಲ್ಪನಾ, ಸಕಾಲ ಯೋಜನೆಯ ಮಿಷನ್ ಡೈರೆಕ್ಟರ್
2) ಎಂ.ಲಕ್ಷ್ಮೀನಾರಾಯಣ, ಲೋಕೋಪಯೋಗಿ ಮತ್ತು ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ
3) ಟಿ.ಕೆ. ಅನಿಲ್ ಕುಮಾರ್, ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ
4) ಇ.ವಿ.ರಮಣರೆಡ್ಡಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ.
ಸದ್ಯ, ಸಕಾಲ ಯೋಜನೆಯ ಅಧೀನ ಕಾರ್ಯದರ್ಶಿಯಾಗಿರುವ 56 ವರ್ಷದ ಕೆ.ಮಥಾಯಿ ಈವರೆಗೆ 60 50ಕ್ಕೂ ಹೆಚ್ಚು ಬಾರಿ ಟ್ರಾನ್ಸ್'ಫರ್ ಆಗಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಪ್ರಾಮಾಣಿಕ ಅಧಿಕಾರಿಗಳಿಗೆ ಟ್ರಾನ್ಸ್'ಫರ್ ಶಿಕ್ಷೆ ಸರ್ವೇಸಾಮಾನ್ಯವಾಗಿರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.