ಕರ್ನಾಟಕದಲ್ಲಿ ಕಾಸರಗೋಡು ಕಾಂಗ್ರೆಸ್ ಕಾರ್ಯಕರ್ತರ ಹಂತಕರು

Published : Feb 19, 2019, 10:46 AM IST
ಕರ್ನಾಟಕದಲ್ಲಿ ಕಾಸರಗೋಡು ಕಾಂಗ್ರೆಸ್ ಕಾರ್ಯಕರ್ತರ ಹಂತಕರು

ಸಾರಾಂಶ

ಕಾಂಗ್ರೆಸ್ ಯುವ ಕಾರ್ಯಕರ್ತರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದವರ ಪೈಕಿ ಕೆಲವರು ಕರ್ನಾಟಕಕ್ಕೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು,  ಈ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಸಹಕರಿಸುವಂತೆ ಕರ್ನಾಟಕ ಪೊಲೀಸರಿಗೆ ಕೇರಳ ಸರ್ಕಾರ ಕೋರಿಕೊಂಡಿದೆ. 

ಕಾಸರಗೋಡು: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಕಾಂಗ್ರೆಸ್ ಯುವ ಕಾರ್ಯಕರ್ತರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದವರ ಪೈಕಿ ಕೆಲವರು ಕರ್ನಾಟಕಕ್ಕೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಈ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಸಹಕರಿಸುವಂತೆ ಕರ್ನಾಟಕ ಪೊಲೀಸರಿಗೆ ಕೇರಳ ಸರ್ಕಾರ ಕೋರಿಕೊಂಡಿದೆ. ಏತನ್ಮಧ್ಯೆ ಇಬ್ಬರು ಶಂಕಿತರನ್ನು ಸೋಮವಾರ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಇನ್ನು ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ, ಕಾಸರಗೋಡಿನಲ್ಲಿ ಕಾಂಗ್ರೆಸ್ ಕೈಗೊಂಡಿದ್ದ ಪ್ರತಿಭಟನೆಯು ಹಿಂಸಾ ಚಾರಕ್ಕೆ ತಿರುಗಿದೆ.

ಹತ್ಯೆಗೈದವರನ್ನು ಬಂಧಿಸಿ, ಅವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವವರು ರಾಜ್ಯ ಡಿಜಿಪಿಗೆ ಸೂಚಿಸಿದ್ದಾರೆ. 

ರಾಹುಲ್ ಗಾಂಧಿ ಕಿಡಿ: ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರು, ಕೇರಳದಲ್ಲಿ ಇಬ್ಬರು ಕಾಂಗ್ರೆಸ್ ಯುವ ಕಾರ್ಯಕರ್ತರ ಹತ್ಯೆಗೈದವರಿಗೆ ಕಾನೂನಿ ನಡಿ ಶಿಕ್ಷೆಗೆ ಗುರಿಪಡಿಸುವವರೆಗೂ ಪಕ್ಷ ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!