
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ಯಶಸ್ವಿಯಾಗಿ ಮುನ್ನುಗ್ಗುತ್ತಿರುವುದನ್ನು ಕಾಣುತ್ತಿದ್ದೇವೆ. ಒಂದು ಕಡೆ ಚಿತ್ರ ಜನರಿಗೆ ಮನರಂಜನೆ ನೀಡುತ್ತಿದ್ದರೆ ಇನ್ನೊಂದು ಕಡೆ ಕನ್ನಡ ಜಾಗೃತಿ ಮೂಡಿಸುತ್ತಿದೆ. ಹೌದು ಚಿತ್ರ ನೋಡಿ ಹೊರಬಂದ ಕನ್ನಡಿಗ ಒಮ್ಮೆ ಮಾತೃಭಾಷೆಯ ಇಂದಿನ ಸ್ಥಿತಿಯನ್ನು ನೆನೆಯುತ್ತಾನೆ. ಗಡಿನಾಡಲ್ಲಿ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಮನಸ್ಸಿನಲ್ಲಿಯೇ ಪ್ರಶ್ನೆ ಮಾಡಿಕೊಳ್ಳುತ್ತಾನೆ.
ಕನ್ನಡಿಗರ ಪ್ರತಿಭಟನೆಗೆ ಮಣಿದು ರಜೆ ಮೇಲೆ ತೆರಳಿದ ಮಲಯಾಳಿ ಶಿಕ್ಷಕ
ಕೇರಳ ಗಡಿನಾಡು ಕಾಸರಗೋಡಿನ ಮಲಯಾಳಿ ನೆಲದಲ್ಲಿ ಕನ್ನಡ ಭಾಷೆಯನ್ನು ಮೇಲಿನ ದಬ್ಬಾಳಿಕೆಯನ್ನು ತೆರೆಯ ಮೇಲೆ ತಂದಿರುವ ರಿಷಬ್ ಶೆಟ್ಟಿ ನಿರ್ದೇಶನದ ‘ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಕನ್ನಡ ಚಿತ್ರಕ್ಕೆ ಕಾಸರಗೋಡಿನಲ್ಲಿ ಭರ್ಜರಿ ಬೆಂಬಲವೂ ಸಿಗ್ತಿದೆ. ಅಲ್ಲಿನ ಥಿಯೇಟರ್ ಗಳಲ್ಲಿ ಸಿನಿಮಾ ಮುನ್ನುಗ್ಗುತ್ತಿದೆ.
ಇನ್ನೊಂದು ಕಡೆ ಕಾಸರಗೋಡಿನ ಮಂಗಲ್ಪಾಡಿ ಪ್ರೌಢ ಶಾಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗೆ ಬುಧವಾರ ಪಾಠಕ್ಕೆ ಆಗಮಿಸಿದ ಮಲಯಾಳಿ ಶಿಕ್ಷಕ ಕನ್ನಡಿಗರ ಪ್ರತಿಭಟನೆಯ ಫಲವಾಗಿ ದೀರ್ಘಕಾಲ ರಜೆ ಮೇಲೆ ತೆರಳುವಂತಾಗಿದೆ. ಇದಕ್ಕೂ ಸಹ ಸಿನಿಮಾ ಒಂದು ರೀತಿಯ ಪ್ರೇರಣೆ ನೀಡಿದೆ ಎಂದರೆ ಅತಿಶಯೋಕ್ತಿ ಅಲ್ಲ.
ಚಿತ್ರ ವಿಮರ್ಶೆ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ರಿಷಬ್ ಶೆಟ್ಟಿ ನಿರ್ದೇಶನ, ಅನಂತ್ ನಾಗ್ ಅಭಿನಯಕ್ಕೆ ಮಾತ್ರ ಚಿತ್ರ ಸೀಮಿತವಾಗಿಲ್ಲ. ಚಿತ್ರದ ಬಗ್ಗೆ, ಚಿತ್ರ ನೋಡಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿಯೂ ಪ್ರತಿಯೊಬ್ಬರೂ ಬರೆದುಕೊಳ್ಳುತ್ತಿದ್ದಾರೆ. ವಿವಿಧ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕುವ ಕಾಸರಗೋಡಿನ ನಮ್ಮದೆ ಕನ್ನಡಿಗರ ಬಗ್ಗೆ, ಅವರ ಸಮಸ್ಯೆ ನಿವಾರಣೆ ಬಗ್ಗೆ ಈ ಸಿನಿಮಾ ಪರಿಹಾರ ಸೂತ್ರವೊಂದನ್ನು ತರಲು ಕಾರಣವಾಗಬಹುದೆ। ಆ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸಬಹುದೆ?
ಪ್ರತ್ಯೇಕ ರಾಜ್ಯ: ಯಾಕೆ ಬೇಕು? ಯಾಕೆ ಬೇಡ?
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.