
ಜಮ್ಮು[ಆ.06]: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸವಲತ್ತು ಕಲ್ಪಿಸುವ ಸಾಂವಿಧಾನಿಕ 370ನೇ ವಿಧಿ ರದ್ದುಗೊಳಿಸುವ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿದ ಬೆನ್ನಲ್ಲೇ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಸೇರಿದಂತೆ ಇತರ ನಾಯಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಪರೇಷನ್ ಕಾಶ್ಮೀರ, ಆರ್ಟಿಕಲ್ 370 ರದ್ದು: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸೋಮವಾರದವರೆಗೂ ಗೃಹಬಂಧನದಲ್ಲಿದ್ದ ಮುಫ್ತಿ, ಅಬ್ದುಲ್ಲಾ ಅಷ್ಟೇ ಅಲ್ಲದೆ, ಜಮ್ಮು-ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ನಾಯಕರಾದ ಸಜ್ಜದ್ ಲೋನ್ ಹಾಗೂ ಇಮ್ರಾನ್ ಅನ್ಸಾರಿ ಸೇರಿದಂತೆ ಇತರರನ್ನು ಬಂಧಿಸಲಾಗಿದೆ. ಆದರೆ, ಇದಕ್ಕಿಂತ ಹೆಚ್ಚಿನ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.