
ಜಮ್ಮು/ಶ್ರೀನಗರ: ಹಿಂಸಾಚಾರ ತ್ಯಜಿಸಿ ಮನೆಗೆ ಮರಳುವಂತೆ ತಾಯಿಯ ಮನವಿಗೆ ಓಗೊಟ್ಟ ಯುವಕನೊಬ್ಬ ಪೊಲೀಸರಿಗೆ ಶರಣಾದ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಇದೇ ರೀತಿ ಕುಟುಂಬ ಸದಸ್ಯರ ಮನವಿಗೆ ಓಗೊಟ್ಟು 4 ಯುವಕರು ಉಗ್ರವಾದ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದರು.
ಅದರ ಬೆನ್ನಲ್ಲೇ ಇದೀಗ ಮತ್ತೋರ್ವ ಯುವಕ, ಹಿಂಸೆ ತ್ಯಜಿಸುವ ನಿರ್ಧಾರ ಕೈಗೊಂಡಿದ್ದಾನೆ. ಉಗ್ರ ಚಟುವಟಿಕೆಯನ್ನು ಬಿಟ್ಟು ಶರಣಾಗತರಾಗುವ ಸ್ಥಳೀಯರನ್ನು ಸ್ವೀಕರಿಸುವುದಾಗಿ ಕಳೆದ ವರ್ಷ ಪೊಲೀಸರು ಪ್ರಕಟಿಸಿದ ಬಳಿಕ ಇದುವರೆಗೆ 12ಕ್ಕೂ ಹೆಚ್ಚು ಉಗ್ರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.