
ಶ್ರೀನಗರ (ಏ.22): ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಪಾಯಿಂಟ್ ಬ್ಲ್ಯಾಂಕ್ ರೇಂಜ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಘಟನೆಯಲ್ಲಿ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಸಾವು ಕಂಡಿದ್ದಾರೆ. ಮಂಜುನಾಥ್ ರಾವ್ ಅವರ ತಲೆಗೆ ನೇರವಾಗಿ ಗುಂಡು ಹಾರಿಸಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷದರ್ಶಿ ವರದಿಯ ಪ್ರಕಾರ ಕನಿಷ್ಠ 5 ಮಂದಿ ಸಾವು ಕಂಡಿರಬಹುದು ಎನ್ನಲಾಗಿದೆ. ನ್ನು 20ಕ್ಕೂ ಅಧಿಕ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಪಹಲ್ಗಾಮ್ ಬಳಿ ರಸ್ತೆಯಲ್ಲಿ ಬೇಲ್‌ಪುರಿ ತಿನ್ನುತ್ತಿರುವಾಗ ಸೇನಾ ಸಮವಸ್ತ್ರದಲ್ಲಿ ಬಂದಿದ್ದ ಉಗ್ರರು ಮೊದಲಿಗೆ ಹೆಸರು ಹಾಗೂ ಯಾವ ಧರ್ಮ ಎಂದು ಕೇಳಿದ್ದಾರೆ. ಮುಸ್ಲಿಮರು ಅಲ್ಲ ಎಂದು ಗೊತ್ತಾದ ಬಳಿಕ ತಲೆಗೆ ಗುಂಡು ಹೊಡೆದಿದ್ದಾರೆ. ಈ ವೇಳೆ ನನ್ನ ಹಾಗೂ ನನ್ನ ಮಗನನ್ನೂ ಕೊಲ್ಲಿ ಎಂದು ಉಗ್ರರ ಎದುರು ನಾನು ಕಣ್ಣೀರಿಟ್ಟೆ. ಆದರೆ, ನೀನು ಹೆಂಗಸು ನಿನ್ನನ್ನು ಕೊಲ್ಲೋದಿಲ್ಲ. ಇದನ್ನ ನೀನು ಮೋದಿಗೆ ಹೋಗಿ ತಿಳಿಸು ಎಂದು ಆತ ಹೇಳಿದ್ದ ಎಂದು ಮತ ಮಂಜುನಾಥ್ ರಾವ್ ಅವರ ಪತ್ನಿ ಪಲ್ಲವಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ತಿಳಿಸಿದ್ದಾರೆ.
ಟೂರಿಸ್ಟ್‌ಗಳಾಗಿದ್ದ ಗಂಡಸರಿಗೆ ಮಾತ್ರ ಹೊಡೆದಿದ್ದಾರೆ. ಹೆಂಗಸರು ಮತ್ತು ಮಕ್ಕಳಿಗೆ ಏನೂ ಮಾಡಿಲ್ಲ. ನನ್ನ ಜೊತೆ ಬಂದಿರುವ ಡ್ರೈವರ್ ತುಂಬಾ ಒಳ್ಳೆಯವರು. ಅವರು ಅಲ್ಲೆಲ್ಲಾ ಗನ್ ಹಿಡಿದುಕೊಂಡು ಬಂದು ಹೊಡೆದಿದ್ದಾರೆ. ಆಕಸ್ಮಾತ್ ಆಗಿ ಹೆಂಗಸರು ಮತ್ತು ಮಕ್ಕಳಿಗೆ ತಾಗಿದ್ದರೆ ಮಾತ್ರ ಗಾಯವಾಗಿರಬಹುದು. ಮದುವೆ ಆಗಿ ಬಂದಿದ್ದ ಕಪಲ್‌ಗಳನ್ನು ಹುಡುಕಿ ಗಂಡಸರನ್ನು ಹಿಂದೂಗಳೇ ಎಂಬುದನ್ನು ಹುಡುಕಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಬರೀ ನ್ಯೂಸ್ ರಿಪೋರ್ಟ್ ಇದೆಲ್ಲಕ್ಕಿಂತ ನಮಗೆ ಒಂದು ಫ್ಲೈಟ್ ಅರೇಂಜ್ ಮಾಡಿ ನಮ್ಮನ್ನ ನಮ್ಮೂರಿಗೆ ಕಳಿಸಿಕೊಡಿ. ನಮ್ಮನೆಯವರ ಬಾಡಿ ಸಮೇತ ನಮ್ಮನ್ನು ಊರಿಗೆ ಕರಿಸಿಕೊಳ್ಳಿ. ಊರಿಂದ ನಾವು 3 ಜನ ಮಾತ್ರ ಊರಿಗೆ ಹೋಗಿದ್ದೇವೆ' ಎಂದು ಪಲ್ಲವಿ ಮಾತನಾಡುವ ವೇಳೆ ಕಣ್ಣೀರಿಟ್ಟಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿ: ಕರ್ನಾಟಕ ಪ್ರವಾಸಿಗ ಬಲಿ, ರಕ್ತಸಿಕ್ತ ಚಿತ್ರಣ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.