
ಹೂಸ್ಟನ್(ಸೆ.22): ಅಮೆರಿಕ ಪ್ರವಾಸದಲ್ಲಿರಯುವ ಪ್ರಧಾನಿ ಮೋದಿ ಅವರನ್ನು, ಕಾಶ್ಮೀರಿ ಪಂಡಿತರ ನಿಯೋಗ ಭೇಟಿ ಮಾಡಿದೆ.
ಹೂಸ್ಟನ್‌ನಲ್ಲಿ ಮೋದಿ ಭೇಟಿ ಮಾಡಿದ ಕಾಶ್ಮೀರಿ ಪಂಡಿತರ ನಿಯೋಗ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಸ್ವಾಗತಿಸಿದೆ.
370ನೇ ವಿಧಿ ರದ್ದತಿಯಿಂದ ಕಣಿವೆಯ ಅಭಿವೃದ್ಧಿ ಸೇರಿದಂತೆ ಕಾಶ್ಮೀರಿ ಪಂಡಿತರ ಪುನರ್ವಸತಿಗೂ ಸಹಾಯಕಾರಿಯಾಗಲಿದೆ ಎಂದು ನಿಯೋಗ ಸಂತೋಷ ವ್ಯಕ್ತಪಡಿಸಿದೆ ಎನ್ನಲಾಗಿದೆ.
ಭಾರತದ ಪ್ರಗತಿಗೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ಬೆಂಬಲಿಸುವುದಾಗಿ ನಿಯೋಗ ತಿಳಿಸಿದ್ದು, 7 ಲಕ್ಷ ಕಾಶ್ಮೀರಿ ಪಂಡಿತರ ಪರವಾಗಿ ಪ್ರಧಾನಿ ಮೋದಿ ಅವರಿಗೆರ ಧನ್ಯವಾದ ಸಲ್ಲಿಸುವುದಾಗಿ ನಿಯೋಗ ತಿಳಿಸಿದೆ.
ಈ ವೇಳೆ ಕಾಶ್ಮೀರಿ ಪಂಡಿತರ ನಿಯೋಗವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಂಡಿತ ಸಮುದಾಯ ಸಾಕಷ್ಟು ನೋವು ಸಹಿಸಿದ್ದು, ಇನ್ನು ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.