ಕೊನೆ ಅಸ್ತ್ರ ಪ್ರಯೋಗಕ್ಕೆ ಕಾಂಗ್ರೆಸ್ ಮುಖಂಡರಿಬ್ಬರ ಮಾಸ್ಟರ್ ಪ್ಲಾನ್

By Web DeskFirst Published Jul 11, 2019, 1:49 PM IST
Highlights

ರಾಜೀನಾಮೆ ಹೈ ಡ್ರಾಮಾ ಮುಂದುವರಿದಿದೆ. ಇತ್ತ ಕೈ ಮುಖಂಡರಿಬ್ಬರು ಕೊನೆಯ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹಿರಿಯ ನಾಯಕರು ಸರ್ಕಾರ ಉಳಿಸಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. 

ಬೆಂಗಳೂರು [ಜು.11] : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ರಾಜೀನಾಮೆ ಪ್ರಹಸನದ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್  ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಪ್ರತ್ಯೇಕ ಸಭೆ ನಡೆಸಿದ್ದಾರೆ. 

ಸರ್ಕಾರ ಸೇಫ್ ಮಾಡುವ ನಿಟ್ಟಿನಲ್ಲಿ ಉಭಯ ನಾಯಕರು  ಗಂಭೀರ ಚರ್ಚೆಯಲ್ಲಿ ತೊಡಗಿದ್ದು ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ. 

ಎಲ್ಲಾ ನಾಯಕರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಲಭ್ಯವಾಗದ ಹಿನ್ನೆಲೆ ಸಮಸ್ಯೆ ಸರಿ ಮಾಡುವ ಯತ್ನದಲ್ಲಿದ್ದಾರೆ. 

ಕರ್ನಾಟಕ ರಾಜಕೀಯದ ಬಗೆಗಿನ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ,ಪರಮೇಶ್ವರ್ ಬಣ ಎಂದು ಹಂಚಿ ಹೋಗಿದ್ದು, ಹೀಗೆ ಆದಲ್ಲಿ ಸರ್ಕಾರ ಉಳಿಯುವ ಬಗ್ಗೆ ನಾಯಕರು ಅನುಮಾನ ವ್ಯಕ್ತಪಡಿಸಿ ಸೇಫ್ ಮಾಡುವ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅತೃಪ್ತರನ್ನ ಕರೆಸಿ ಮಾತಾಡುವಂತೆ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಗೆ ಸೂಚನೆ ನೀಡಲು ನಿರ್ಧಾರ ಮಾಡಿದ್ದು, ಇಲ್ಲದಿದ್ದಲ್ಲಿ ಇನ್ನೊಂದಿಷ್ಟು ಶಾಸಕರು ರಾಜೀನಾಮೆ ನೀಡುವ ಅನುಮಾನ ಉಭಯ ನಾಯಕರಿಂದ ವ್ಯಕ್ತವಾಗಿದೆ.

 ಹೀಗೆ ಆದಲ್ಲಿ ಕಾಂಗ್ರೆಸ್ ತೀವ್ರ ಸಂಕಷ್ಟ ಎದುರಿಸುವ ಸಾಧ್ಯತೆ ಇದ್ದು, ಎಲ್ಲವನ್ನೂ ಸೂಕ್ತ ಹಂತಕ್ಕೆ ತಂದು ನಿಲ್ಲಿಸಲು ಹಿರಿಯ ನಾಯರನ್ನು ಪ್ರತ್ಯೇಕವಾಗಿ ಕರೆಸಿ ಮಾತನಾಡಲು ನಿರ್ಧಾರ ಮಾಡಿದ್ದಾರೆ.

ಅಲ್ಲದೇ ಈ ಎಲ್ಲಾ ಬೆಳವಣಿಗೆ ಬಳಿಕ ಕೈ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿ ಅವರಿಂದಲೂ ಸಲಹೆ ಸೂಚನೆಗಳನ್ನು ಪಡೆಯಲಿದ್ದಾರೆ.

click me!