
ಹೈದರಾಬಾದ್[ಡಿ.13]: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪುನರಾಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕೆ. ಚಂದ್ರಶೇಖರರಾವ್ ಅವರು ಗುರುವಾರ ಪ್ರಮಾಣ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಸಮಾರಂಭದಲ್ಲಿ ‘ಕೆಸಿಆರ್’ ಅವರು ಶಪಥಗ್ರಹಣ ಮಾಡಲಿದ್ದಾರೆ. ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಅವರು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ.
ಬುಧವಾರ ನಡೆದ ಟಿಆರ್‌ಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಶಾಸಕರು ಕೆಸಿಆರ್ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಡಿ.7ರಂದು ನಡೆದ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 88 ಸ್ಥಾನಗಳನ್ನು ಟಿಆರ್‌ಎಸ್ ಗೆದ್ದುಕೊಂಡಿತ್ತು. ಕೆಸಿಆರ್ ಅವರು ಸಿದ್ದಿಪೇಟ್ ಜಿಲ್ಲೆಯ ಗಜ್ವೇಲ್ ಕ್ಷೇತ್ರದಿಂದ 58290 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ