
ಬೆಂಗಳೂರು : ರಾಜ್ಯ ಗೃಹ ಇಲಾಖೆ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಕೆಂಪಯ್ಯ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದ ಬೆನ್ನಲ್ಲೇ ಆಯೋಗಕ್ಕೆ ದೂರು ನೀಡಲು ಬಿಜೆಪಿ ಮುಂದಾಗಿದೆ.
ರಾಜ್ಯ ಸರ್ಕಾರ ನೇಮಕ ಮಾಡಿರುವ ಸಲಹೆಗಾರರು ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂದು ರಾಜ್ಯ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಆದರೂ ಪ್ರತಿನಿತ್ಯ ಕರ್ತವ್ಯ ನಿರ್ವಹಿಸುತ್ತಿದ್ದು, ಕಚೇರಿಗೆ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿಗೆ ಆಪ್ತವಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಅನುಕೂಲ ಮಾಡಿಕೊಡಲು ಹುದ್ದೆಯಲ್ಲಿ ಮುಂದುವರಿದಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪ ಮಾಡಿತ್ತು. ಈ ಆರೋಪದ ನಡುವೆಯೂ ಹುದ್ದೆಯನ್ನು ತ್ಯಜಿಸಿದ ಹಿನ್ನೆಲೆಯಲ್ಲಿ ಮತ್ತೆ ಆಯೋಗಕ್ಕೆ ಬಿಜೆಪಿ ದೂರು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೆಂಪಯ್ಯ ಅವರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಆಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಕೇಳಿದೆ. ನೀತಿ ಸಂಹಿತೆ ಜಾರಿ ಬಳಿಕವೂ ಕೆಲಸದಲ್ಲಿ ತೊಡಗಿದ್ದಾರೆಯೇ ಎಂಬುದರ ವಿವರಣೆ ಕೇಳಿದ್ದಾರೆ ಎಂದು ಹೇಳಲಾಗಿದೆ.
ಈ ಮಧ್ಯೆ, ಆಯೋಗ ಮಾಹಿತಿ ಕೇಳಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಕೆಂಪಯ್ಯ ಅವರು ಕಚೇರಿಯಿಂದ ದೂರ ಉಳಿದಿದ್ದಾರೆ ಎಂದು ಗೊತ್ತಾಗಿದೆ. ಅಲ್ಲದೇ, ಅವರ ಕಚೇರಿಯಲ್ಲಿ ಸಿಬ್ಬಂದಿ ಸಹ ಗೈರಾಗಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.