
ತಿರುವನಂತಪುರ: ಪ್ರವಾಹದಿಂದ ನಲುಗಿದ್ದ ರಾಜ್ಯದಲ್ಲಿ ಜನಜೀವನ ಸಹಜಸ್ಥಿತಿಗೆ ಮರಳುತ್ತಿರುವ ಹಿನ್ನೆಲೆ ಯಲ್ಲಿ, ಅನಾರೋಗ್ಯ ದಿಂದ ಬಳಲುತ್ತಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ.
ವಾಸ್ತವವಾಗಿ ವಿಜಯನ್ ಅವರು ಆ. 19ರಂದೇ ಅಮೆರಿಕಕ್ಕೆ ತೆರಳಬೇಕಿತ್ತು. ಆದರೆ ರಾಜ್ಯದಲ್ಲಿ ಏಕಾಏಕಿ ಭಾರೀ ಮಳೆಯಾಗಿ, ಶತಮಾನದಲ್ಲಿ ಕಂಡುಕೇಳರಿಯದ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಅವರು ತಮ್ಮ ಅಮೆರಿಕ ಭೇಟಿ ಮುಂದೂಡಿದ್ದರು.
ವಿಜಯನ್, ಅಮೆರಿಕದ ಮೇಯೋ ಕ್ಲಿನಿಕ್‌ನಲ್ಲಿ 3 ವಾರ ಚಿಕಿತ್ಸೆ ಪಡೆದು ತವರಿಗೆ ಮರಳಲಿದ್ದಾರೆ. ಈ ನಡುವೆ, ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುವ ಮುನ್ನ ರಾಜ್ಯಪಾಲ ಪಿ. ಸದಾಶಿವಂ ಅವರನ್ನು ಭೇಟಿಯಾದ ಸಿಎಂ ಪ್ರವಾಹ ಸಂತ್ರಸ್ತರ ಪುನರ್ವಸತಿ, ರಕ್ಷಣಾ ಕಾರ್ಯದ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.