
ತಿರುವನಂತಪುರಂ(ಸೆ.30): ಬೂರ್ಖಾ ಧರಿಸಿ ಆಸ್ಪತ್ರೆಯ ಪ್ರಸವ ಕೋಣೆಯೊಳಗೆ ನುಗ್ಗಿದ ಪೊಲೀಸ್ ಅಧಿಕಾರಿಯೋರ್ವನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ಕೇರಳದ ಇಡುಕಿಯಲ್ಲಿ ನಡೆದಿದೆ.
ಇಲ್ಲಿನ ಅಲ್ ಅಶರ್ ಮೆಡಿಕಲ್ ಕಾಲೇಜಿನ ಪ್ರಸವ ಕೋಣೆಗೆ ನುಗ್ಗಿದ ಪೊಲೀಸ್ ಅಧಿಕಾರಿ ನೂರ್ ಸಮೀರ್ ಗುಪ್ತವಾಗಿ ಅಲ್ಲಿನ ಚಟುವಟಿಕೆಗಳನ್ನು ಗಮನಿಸುತ್ತಿದ್ದ ಎನ್ನಲಾಗಿದೆ. ನೂರ್ ಸಮೀರ್ ಬೂರ್ಖಾ ಧರಿಸಿ ಪ್ರಸವ ಕೋಣೆಯೊಳಗೆ ಹೋದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೂಡಲೇ ಆಸ್ಪತ್ರೆ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ.
ಆದರೆ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ನೂರ್ ಸಮೀರ್, ಕ್ಷಣಾರ್ಧದಲ್ಲಿ ಆಸ್ಪತ್ರೆ ಆವರಣದಿಂದ ಮಾಯವಾಗಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಲಾಗಿದ್ದು, ಬುರ್ಖಾ ಧರಿಸಿದ ವ್ಯಕ್ತಿ ಕುಲ್ಮಾವು ಪೊಲೀಸ್ ಠಾಣೆಯ ಅಧಿಕಾರಿ ಎಂಬುದು ಖಚಿತವಾಗಿದೆ.
ನೂರ್ ಸಮೀರ್ ವಿರುದ್ಧ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿದ್ದು, ಡ್ರಗ್ಸ್ ಮಾರಾಟದ ಆರೋಪಿಯೋರ್ವನಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.