
ತಿರುವನಂತಪುರಂ[ಆ.14]: ದೇವರ ನಾಡಿನಲ್ಲಿ ವರುಣನ ತಾಂಡವ ಮುಂದುವರಿದಿದ್ದು, ಮತ್ತೆ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಉತ್ತರ ಭಾಗದಲ್ಲಿ ಮಳೆ ಆರ್ಭಟ ಕಡಿಮೆಯಾಗುತ್ತಿದ್ದಂತೆ, ಮಧ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ಆಲಪ್ಪುಳ, ಎರ್ನಾಕುಲಂ, ಕೊಚ್ಚಿ ಸೇರಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲಪ್ಪುರಂ ಹಾಗೂ ಕೋಯಿಕ್ಕೋಡ್‌ನಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಕೊಲ್ಲಂ, ಪಟ್ಟಣಂತಿಟ್ಟ, ಕೊಟ್ಟಾಯಂ, ಪಾಲಕ್ಕಾಡ್ ಹಾಗೂ ತ್ರಿಶ್ಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿರುವ ಜಿಲ್ಲೆಗಳಲ್ಲಿ 20 ಸೆಂ.ಮಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಣಭೀಕರ ಮಳೆ ರಾಜ್ಯಾದ್ಯಂತ ಈ ವರೆಗೆ 90 ಮಂದಿಯನ್ನು ಬಲಿ ಪಡೆದುಕೊಂಡಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ. ರಾಜ್ಯಾದ್ಯಂತ 1,332 ಕಾಳಜಿ ಕೇಂದ್ರಗಳಲ್ಲಿ 2.52 ಲಕ್ಷ ಜನ ಆಶ್ರಯ ಪಡೆದುಕೊಂಡಿದ್ದಾರೆ. ವಯನಾಡ್, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಗುಡ್ಡ ಕುಸಿತದಿಂದ ಹೆಚ್ಚು ಹಾನಿ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿವೆ. ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹಿತ ಸಂಪುಟ ಸದಸ್ಯರು ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಅಭಯ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.