
ನವದೆಹಲಿ(ಮೇ.30): ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಕೇರಳ ಸರ್ಕಾರ ಪ್ರತಿ ಲೀಟರ್'ಗೆ 1 ರೂ. ಕಡಿತಗೊಳಿಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶ ಹೊರಡಿಸಿದ್ದು ಜೂನ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಹಲವು ರಾಜ್ಯಗಳು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಸುಂಕದ ಮೇಲೆ ಮೌಲ್ಯಾಧಾರಿತ ತೆರಿಗೆಯನ್ನು ವಿಧಿಸಿವೆ. ಕೇರಳ ರಾಜ್ಯ ಹೆಚ್ಚುವರಿ ತೆರಿಗೆಯನ್ನು ಕಡಿಮೆಗೊಳಿಸಿದ ಹಿನ್ನಲೆಯಲ್ಲಿ 1 ರೂ. ಕಡಿಮೆಯಾಗಲಿದೆ.
ದೇಶದ ಅತೀ ದೊಡ್ಡ ಸಗಟು ಇಂಧನ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ 1 ಪೈಸೆ ಮಾತ್ರ ಕಡತಗೊಳಿಸಿತ್ತು. ಪಂಜಾಬ್ ಹಾಗೂ ಮಹಾರಾಷ್ಟ್ರ ಬಿಟ್ಟರೆ ಕೇರಳದಲ್ಲಿ ಮಾತ್ರ ಇಂಧನಗಳ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸಲಾಗುತ್ತಿತ್ತು.
ರೈತರ ಸಾಲ ಮನ್ನಾ ಮಾಡಲು ಹೆಚ್ಚು ಆಸಕ್ತಿ ವಹಿಸುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರಕಾರ ಸಾರ್ವಜನಿಕರಿಗೆ ಹೊರೆಯಾಗುತ್ತಿರುವ ಇಂಧನ ಬೆಲೆಯನ್ನು ಕಡಿಮೆಗೊಳಿಸುತ್ತಾರಾ ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.