ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಕ್ರೈಂ ಅಲ್ಲ

First Published May 18, 2018, 8:11 AM IST
Highlights

ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು ಅಪಾಯ ಮತ್ತು ಸಾರ್ವಜನಿಕ ಸುರಕ್ಷತೆಗೆ ಮಾರಕ ಎಂಬ ಕಾನೂನು ರೂಪಿಸದ ಹಿನ್ನೆಲೆಯಲ್ಲಿ ವಾಹನ ಚಾಲನೆಯ ವೇಳೆ ಮೊಬೈಲ್ ಬಳಸುವುದು ಅಪರಾಧ ಅಲ್ಲ ಎಂದು ಕೇರಳ ಹೈಕೋರ್ಟ್ ತಿಳಿಸಿದೆ. 

ಕೊಚ್ಚಿ (ಮೇ 18 ): ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು ಅಪಾಯ ಮತ್ತು ಸಾರ್ವಜನಿಕ ಸುರಕ್ಷತೆಗೆ ಮಾರಕ ಎಂಬ ಕಾನೂನು ರೂಪಿಸದ ಹಿನ್ನೆಲೆಯಲ್ಲಿ ವಾಹನ ಚಾಲನೆಯ ವೇಳೆ ಮೊಬೈಲ್ ಬಳಸುವುದು ಅಪರಾಧ ಅಲ್ಲ ಎಂದು ಕೇರಳ ಹೈಕೋರ್ಟ್ ತಿಳಿಸಿದೆ. 

ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ವೇಗವಾಗಿ ಕಾರು ಚಲಾಯಿಸುತ್ತಿದ್ದ ಕಾರಣಕ್ಕಾಗಿ ಸಂತೋಷ್ ಎಂಬಾತನ ವಿರುದ್ಧ ಕೇರಳ ಪೊಲೀಸರು ಕೇಸು ದಾಖಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ವಾಹನ ಚಾಲನೆಯ ವೇಳೆ ಮೊಬೈಲ್ ಬಳಕೆಗೆ ನಿರ್ಬಂಧ ಹೇರಲು ಸೂಕ್ತ ಕಾನೂನು ಇಲ್ಲದ ಕಾ ರಣ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದಿದೆ.

click me!