
ಮಂಗಳೂರು (ನ.09): ದಕ್ಷಿಣ ಕನ್ನಡದ ಸುಳ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪ ಹೊತ್ತಿದ್ದ ಕಾಸರಗೋಡಿನ ಜಿಲ್ಲಾ ನ್ಯಾಯಾಧೀಶ ಉಣ್ಣಿಕೃಷ್ಣನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಸರಗೋಡಿನ ವಿದ್ಯಾನಗರದಲ್ಲಿರುವ ಸರ್ಕಾರಿ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಉಣ್ಣಿಕೃಷ್ಣನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತ್ರಿಶ್ಶೂರ್ ನಿವಾಸಿಯಾಗಿದ್ದ ಉಣ್ಣಿಕೃಷ್ಣನ್, ನವೆಂಬರ್ 6 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾಗ ರಿಕ್ಷಾ ಚಾಲಕ ಅಬೂಬಕರ್ ಜತೆ ತಗಾದೆ ತೆಗೆದು ಹಲ್ಲೆ ನಡೆಸಿದ್ದರು. ಜತೆಗೆ ಪೊಲೀಸ್ ಸಿಬ್ಬಂದಿ ಸಚಿನ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಗಫೂರ್ ಮೇಲೆ ಹಲ್ಲೆ ನಡೆಸಿದ್ದರು.
ಆ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಘಟನೆಯಿಂದ ಅಘಾತಗೊಂಡಿದ್ದ ಉಣ್ಣಿಕೃಷ್ಣನ್, ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.