
ಕೊಚ್ಚಿ, ಆಗಸ್ಟ್ 18: ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ನೆರವಾಗಲು ಯುನೈಟೆಡ್ ಅರಬ್ ಎಮಿರೇಟ್ಸ್ ಮುಂದಾಗಿದೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಸಲುವಾಗಿಯೇ ಯುಎಇ ಸಮಿತಿಯೊಂದನ್ನು ರಚಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶೇಖ್ ಖಲೀಫಾ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವುದು ದೇಶದ ವಿಶೇಷ ಜವಾಬ್ದಾರಿಯಾಗಿದೆ. ಕೇರಳದಿಂದ ಬಂದ ಅನೇಕ ಜನರು ಯುಎಇಯಲ್ಲಿ ನೆಲೆಸಿದ್ದಾರೆ ಎಂದಿದ್ದಾರೆ. ಕೇರಳದ ಜನರು ಯಾವಾಗಲೂ ಮತ್ತು ಇಂದಿಗೂ ಯುಎಇಯ ಯಶಸ್ಸಿನ ಕಥೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ ಎಂದಿದ್ದಾರೆ.
ಕೇರಳದಲ್ಲಿ 400 ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ದೇಶದ ಹಲವು ಭಾಗಗಳಿಂದ ಪರಿಹಾರ ಹರಿದು ಬರುತ್ತಿದ್ದು ಸೇನಾ ಪಡೆಗಳು ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.