
ಬೆಂಗಳೂರು (ಫೆ.15): ಸಿಎಂ, ಸಚಿವ ಮಹದೇವಪ್ಪ, ಸಂಸದ ಧ್ರುವನಾರಾಯಣ ಅವರ ಸಲಹೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಕೇಶವಮೂರ್ತಿ ಸೇರ್ಪಡೆಯಾಗ್ತಿದ್ದಾರೆ. ಅಹಿಂದ ಅಂತ ನಮ್ಮನ್ನ ಕರೆಯುತ್ತಾರೆ. ನಮಗೇನೂ ಬೇಜಾರು ಇಲ್ಲ, ನಾವು ಇರೋದು ಅವರಿಗಾಗಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮುಂದಿನ ತಿಂಗಳು ಸಿಎಂ 12ನೇ ಬಜೆಟ್ ಮಂಡಿಸುತ್ತಿದ್ದಾರೆ. ಕಳೆದ ಬಾರಿ ದಲಿತ ಸಮುದಾಯಕ್ಕಾಗಿ 21000 ಕೋಟಿ ರೂ. ಮೀಸಲಿಡಲಾಗಿತ್ತು. ಈ ಬಾರಿಯೂ ದಲಿತ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಲಿದ್ದಾರೆ.
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ಕೇಶವಮೂರ್ತಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲ್ಲಲಿದ್ದಾರೆ. ಇದರ ಜೊತೆ ಗುಂಡ್ಲುಪೇಟೆಯಲ್ಲಿ ಉಪಚುನಾವಣೆ ಇದೆ.
ಈ ಎರಡು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಸಂದೇಶ ಕಳುಹಿಸಬೇಕಾಗುತ್ತೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಧಿಕಾರ ಹಿಡಿಯಲಿದ್ದೇವೆ . ಹೈಕಮಾಂಡ್ ಅನುಮತಿ ಮೇರೆಗೆ ಕೇಶವಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.