ಬಿಗ್ ಬಾಸ್ ರನ್ನರ್ ಅಪ್ ಕಿರಿಕ್ ಕೀರ್ತಿ ಮೇಲೆ ಹಲ್ಲೆ

Published : Mar 18, 2017, 05:35 AM ISTUpdated : Apr 11, 2018, 12:57 PM IST
ಬಿಗ್ ಬಾಸ್ ರನ್ನರ್ ಅಪ್ ಕಿರಿಕ್ ಕೀರ್ತಿ ಮೇಲೆ ಹಲ್ಲೆ

ಸಾರಾಂಶ

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ  ಕೀರ್ತಿ, ಜ್ಞಾನಭಾರತಿ ಕ್ಯಾಂಪಸ್ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಬೈಕ್ ಗೆ ತಮ್ಮ ಕಾರಿನ  ಹಾರನ್ ಹೊಡೆದಿದ್ದಾರೆ.

ಬೆಂಗಳೂರು(ಮಾ.18): ಬಿಗ್ ಬಾಸ್ ರನ್ನರ್ ಅಪ್ ಕಿರಿಕ್ ಕೀರ್ತಿ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ 10 ಗಂಟೆ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಂಪಸ್ ಸಮೀಪ ನಡೆದಿದೆ.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ  ಕೀರ್ತಿ, ಜ್ಞಾನಭಾರತಿ ಕ್ಯಾಂಪಸ್ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಬೈಕ್ ಗೆ ತಮ್ಮ ಕಾರಿನ  ಹಾರನ್ ಹೊಡೆದಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ ಇಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ ಕೀರ್ತಿ ಮತ್ತು ಅವರ ಗೆಳೆಯ ಮಂಜುನಾಥ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ನೆರೆದ ಸಾರ್ವಜನಿಕರು ಪಾನಮತ್ತರಾಗಿದ್ದ ಇಬ್ಬರು ಹಲ್ಲೆಕೋರರನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಇನ್ನು ಘಟನೆ ಸಂಬಂಧ ಕಿರಿಕ್ ಕೀರ್ತಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ,  ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ: ಸಚಿವ ಆರ್.ಬಿ.ತಿಮ್ಮಾಪುರ ವಿಶ್ವಾಸ
ಐಪಿಎಸ್ ಅಧಿಕಾರಿಗೆ ಅಸಭ್ಯ ಕಾಮೆಂಟ್, ಬಾಡಿ ಶೇಮಿಂಗ್: ಕಾಮೆಂಟ್ ಬಾಕ್ಸ್ ಬಂದ್ ಮಾಡಿದ ಪೊಲೀಸರ ಕ್ರಮಕ್ಕೆ ಭಾರಿ ಆಕ್ರೋಶ!