ಕೊಡಗಿನಲ್ಲಿ ಭಾರೀ ಮಳೆ ಸುರಿದು ಉಂಟಾದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಸರ್ಕಾರ ವರ್ಗಾವಣೆ ಮಾಡಲಿದೆ ಎನ್ನುವ ವದಂತಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಸಂದರ್ಭ ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಹಗಲಿರುಳು ಎನ್ನದೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಸರ್ಕಾರ ವರ್ಗಾವಣೆ ಮಾಡಲಿದೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪ್ರಕೃತಿ ವಿಕೋಪದಿಂದಾಗಿ ಮರ ಸಾಗಾಟ, ಮರಳು ಸಾಗಾಣಿಕೆ, ರೆಸಾರ್ಟ್- ಹೋಂಸ್ಟೇನಲ್ಲಿ ಪ್ರವಾಸಿಗರ ನಿರ್ಬಂಧ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಈ ಹಿನ್ನೆಲೆ ಅವರ ಸ್ಥಾನಕ್ಕೆ ಬೇರೆಯ ಅಧಿಕಾರಿಯನ್ನು ನೇಮಿಸುವಂತೆ ಕೆಲವರು ಹುನ್ನಾರ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕೊಡಗು ಪ್ರವಾಹ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಸರ್ಕಾರದಿಂದ ವರ್ಗಾವಣೆಯ ಬಗ್ಗೆ ಈ ವರೆಗೆ ಯಾವುದೇ ಆದೇಶ ಬಂದಿಲ್ಲ. ಆದರೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀವಿದ್ಯಾ ಫಾರ್ ಕೊಡಗು ಟ್ರೆಂಡ್ ಆರಂಭವಾಗಿದೆ.