
ಹಾಸನ, [ಅ.12]: ಕೋಡಿ ಮಠದ ಶ್ರೀ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೆ ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಗುರುವಾರ ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಅವಧಿ ಇನ್ನೆರಡು ತಿಂಗಳು ಮಾತ್ರ ಅಂತ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರ್ಕಾರಕ್ಕೆ ಸಹೋದರರ ಕಂಟಕ: ಕೋಡಿ ಶ್ರೀ ಭವಿಷ್ಯ
ವರ್ಷಾಂತ್ಯದವರೆಗೂ ಮಳೆಯಾಗಲಿದೆ. ದ್ವೇಷ - ಅಸೂಯೆ ಹೆಚ್ಚಳವಾಗುತ್ತದೆ. 2 ತಿಂಗಳು ಕಾದು ನೋಡಿ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಹಿಂದೆ ವಿಧಾನಸಬಾ ಚುನಾವಣೆಗೂ ಮುನ್ನವೇ ಕೋಡಿ ಶ್ರೀ ಭವಿಷ್ಯ ನುಡಿದಿದ್ದರು. ಅದು ನಿಜವಾಗಿದೆ.
ಇದೀಗ ಅದೇ ಸ್ವಾಮೀಜಿಗಳು ಕುಮಾರಸ್ವಾಮಿ ಸರ್ಕಾರದ ಆಯುಷ ಇನ್ನು 2 ತಿಂಗಳು ಎಂದು ಹೇಳಿರುವ ಭವಿಷ್ಯ ವಾಣಿ ರಾಜಕೀಯವಲಯದಲ್ಲಿ ಸಂಚಲವನ್ನುಂಟು ಮಾಡಿದೆ.
ಇನ್ನು ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿದ್ದ ಬಿಸ್ಪಿಯ ಶಾಸಕ ಎನ್.ಮಹೇಶ್ ಅವರು ಗುರುವಾರ ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.