'ಮೋದಿ ಅಲೆಯೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣ'

By Web DeskFirst Published May 30, 2019, 4:02 PM IST
Highlights

ಸೋಲಿಲ್ಲದ ಸರದಾರ ಎಂದೇ ಬಿಂಬಿತರಾಗಿದ್ದ ಕೆ.ಎಚ್​​. ಮುನಿಯಪ್ಪ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲುಕಂಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವೇನು ಎನ್ನುವುದನ್ನು ಮುನಿಯಪ್ಪ ಅವರ ಬಾಯಲ್ಲೇ ಕೇಳಿ.

ಕೋಲಾರ, (ಮೇ.30) : ನಾನು ಗೆದ್ದರೂ, ಸೋತರೂ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗಲ್ಲ ಎಂದು ಮಾಜಿ ಸಂಸದ ಕೆ.ಎಚ್​​. ಮುನಿಯಪ್ಪ ತಿಳಿಸಿದ್ದಾರೆ.

ಇಂದು (ಗುರುವಾರ) ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯಿಂದ ಈ ಬಾರಿ ಕಾಂಗ್ರೆಸ್​​ ಪಕ್ಷ ಸೋಲನುಭವಿಸಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​​ ಉತ್ತಮ ಫಲಿತಾಂಶದೊಂದಿಗೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಸಂಸದರಾಗಿ ಆಯ್ಕೆಯಾಗಿರುವ ಎಸ್​​​. ಮುನಿಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್​​ ಪಕ್ಷಕ್ಕೆ 5 ಲಕ್ಷ ಮತಗಳನ್ನು ನೀಡಿದ ಕ್ಷೇತ್ರದ ಮತದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

 ರಾಜ್ಯದ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿದ ಅವರು ಸಮ್ಮಿಶ್ರ ಸಕಾರದಿಂದ ರಾಜ್ಯದಲ್ಲಿ ಸೂಕ್ತ ಫಲಿತಾಂಶ ಸಿಗಲಿಲ್ಲ. ಮುಂದಿನ ಚುನಾವಣೆಯಲ್ಲಿ ಲೋಕಸಭೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸುತ್ತೇನೆ. ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ನಿಲುವು ಸ್ಪಷ್ಟಪಡಿಸಿದರು. 

click me!